ಕಡಬ, ಸುಳ್ಯ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

rajendra kumar kv
Published on

ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಆಗಸ್ಟ್ 3) ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಹವಾಮಾನ ಇಲಾಖೆ ದ.ಕ.ಹಾಗೂ ಉಡುಪಿ ಜಿಲ್ಲಾದ್ಯಂತ ಮುಂದಿನ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net