ನೋಂದಣಿ ಕೇಂದ್ರಕ್ಕೆ ಡಿಸಿ ರಾಗಪ್ರಿಯ ಭೇಟಿ

YADGIRI
Published on

ಯಾದಗಿರಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಾಪಿಸಲಾಗಿರುವ ಭತ್ತ ಖರೀದಿಯ ನೋಂದಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.  ಜಿಲ್ಲೆಯ ರೈತರು ಬೆಳೆದ ಭತ್ತಕ್ಕೆ ಸರ್ಕಾರದಿಂದ ಬೆಂಬಲ ಬೆಲೆ ನೀಡಿ, ಖರೀದಿಸಲು ಅನುಕೂಲವಾಗುವಂತೆ ಭತ್ತ ಖರೀದಿಯ ಒಟ್ಟು 5 ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರು ಈ ಕೇಂದ್ರಗಳಿಗೆ ತರುವ ಭತ್ತದ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾಗಬಾರದು. ಸಂಬಂಧಿಸಿದ ಅಧಿಕಾರಿಗಳು ಈ ದಿಸೆಯಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದರೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಅವರು ಎಚ್ಚರಿಕೆ ನೀಡಿದರು.

ಸ್ಥಳದಲ್ಲಿದ್ದ ರೈತರು ಪಹಣಿಯಲ್ಲಿ ಭತ್ತದ ಬೆಳೆಯ ವಿವರ ಲಭ್ಯವಿಲ್ಲ ಎಂಬ ಕಾರಣಕ್ಕೆ ಹೆಚ್ಚಿನ ರೈತರಿಂದ ಭತ್ತ ಖರೀದಿಗೆ ನೋಂದಣಿ ಸಾಧ್ಯವಾಗುತ್ತಿಲ್ಲ. ಹೆಚ್ಚಿನ ನೋಂದಣಿಗೆ ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಗಪ್ರಿಯಾ, ಪಹಣಿಯಲ್ಲಿ ಕಂಡುಬಂದ ದೋಷವನ್ನು ಪರಿಹರಿಸಲು ಕೂಡಲೇ ಕ್ರಮ ವಹಿಸುವಂತೆ ಸ್ಥಳದಲ್ಲಿಯೇ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಮೊಬೈಲ್ ಮೂಲಕವೇ ಸೂಚನೆ ನೀಡಿದರು.

ಯಾದಗಿರಿ ಭತ್ತ ಖರೀದಿ ಕೇಂದ್ರದಲ್ಲಿ 31, ಹುಣಸಗಿ 58, ಸುರಪುರ 40, ನಾಯ್ಕಲ್ 10 ಮಂದಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ತಿಳಿಸಿದರು.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net