

ಕಾರವಾರ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ನಿರ್ವಹಿಸಲು ಎಲ್ಲ ಇಲಾಖೆ ಅಧಿಕಾರಿಗಳು ಸನ್ನದ್ದರಾಗುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ವಿಪತ್ತು ನಿರ್ವಹಣೆ ಸಿದ್ಧತೆ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು. ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜೀವ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದರು.
ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳಲ್ಲಿ ಚರಂಡಿ ಹಾಗೂ ನೀರು ಹರಿದು ಹೋಗುವ ಕಾಲುವೆಗಳನ್ನು ಸ್ವಚ್ಛ ಮಾಡಬೇಕು. ಶರಾವತಿ ಮತ್ತು ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟದಲ್ಲಿ ನಿಗದಿತ ನೀರಿನ ಮಟ್ಟ ಕಾಯ್ದುಕೊಳ್ಳಬೇಕು. ನೀರು ಬಿಡುವ ಮೊದಲು ತಹಸೀಲ್ದಾರ್ ಹಾಗೂ ಎಸಿಗಳಿಗೆ ಮಾಹಿತಿ ನೀಡಬೇಕು. ಜಲಾಶಯಗಳಿಂದ ಹಂತ, ಹಂತವಾಗಿ ನೀರು ಹೊರಬಿಡಬೇಕು. ಗೇಟ್‌ಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಬೇಕು. ತಹಸೀಲ್ದಾರ್‌ಗಳು ಮುಳುಗುತಜ್ಞರು, ವೃತ್ತಿಪರ ಈಜುಗಾರರ ವಿವರ, ದೋಣಿಗಳ ಮಾಲೀಕರ ವಿವರ, ಕಾಳಜಿ ಕೇಂದ್ರಗಳು ವಿವರಗಳನ್ನೊಳಗೊಂಡ ಯೋಜನೆಯನ್ನು ಸಿದ್ಧ ಮಾಡಿ ಇಟ್ಟುಕೋಳಬೇಕು.
ರಾಷ್ಟ್ರೀಯ ಹೆದ್ದಾರಿಗಳ ಪಕ್ಕದಲ್ಲಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕು. ಗುಡ್ಡ ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಗುರುತಿಸಿ, ತುರ್ತು ಸಂದರ್ಭದಲ್ಲಿ ಸ್ಪಂದಿಸಲು ಅಗತ್ಯ ರಕ್ಷಣಾ ಸಾಮಗ್ರಿಗಳನ್ನೊಳಗೊಂಡ ತಂಡಗಳನ್ನು ರಚನೆ ಮಾಡಿ ನಿಯೋಜಿಸಬೇಕು ಎಂದು ಸೂಚಿಸಿದರು. ಜಿಪಂ ಸಿಇಒ ಈಶ್ವರ ಕಾಂದೂ, ಎಡಿಸಿ ಪ್ರಕಾಶ ರಜಪೂತ ಇದ್ದರು.
ಕಾರವಾರ: ಜಿಲ್ಲೆಯ 118 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬAದಿದ್ದು, ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗಿದೆ ಎಂದು ಜಿಲ್ಲಾಽಕಾರಿ ಗಂಗೂಬಾಯಿ ಮಾನಕರ್ ಜಿಲ್ಲಾಽಕಾರಿ ಸಿದ್ದರಾಮಯ್ಯ ಅವರಿಗೆ ವರದಿ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ವಿಡಿಯೋ ಕಾನರೆನ್ಸ್ ಮೂಲಕ ರಾಜ್ಯದ ಎಲ್ಲ ಜಿಲ್ಲೆಗಳ ಅಽಕಾರಿಗಳ ಸಭೆ ನಡೆಸಿದ್ದು, ಉತ್ತರ ಕನ್ನಡ ಡಿಸಿ, ಸಿಇಒ ಸೇರಿ ಇತರ ಅಽಕಾರಿಗಳು ಸಿಎಂ ಅವರಿಗೆ ಮಾಹಿತಿ ನೀಡಿದರು.
ಮುಂಗಾರು ಪೂರ್ವ ಸಿದ್ದತೆಗಳ ಕುರಿತಂತೆ ಈಗಾಗಲೇ ಅಕಾರಿಗಳ ಸಭೆ ನಡೆಸಿ, ಅಗತ್ಯ ನಿರ್ದೇಶನಗಳನ್ನು ನೀಡಲಾಗಿದ್ದು, ಕೃಷಿ ಚಟುವಟಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಸಾಕಷ್ಟು ಪ್ರಮಾಣದ ರಸಗೊಬ್ಬರ, ಭಿತ್ತನೆ ಬೀಜ ಮತ್ತು ಕೀಟನಾಶಕಗಳ ದಾಸ್ತಾನು ಮಾಡಿಕೊಳ್ಳಲಾಗಿದೆ, ಬೆಳೆ ಪರಿಹಾರದ ಮೊತ್ತವನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ಮಾಹಿತಿ ನೀಡಿದರು.