ಅತಿಕಾರಿಬೆಟ್ಟುವಿನಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ

IMG-20220820-WA0084
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಅತಿಕಾರಿಬೆಟ್ಟು ಗ್ರಾಮದ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಶನಿವಾರ ಗ್ರಾಮ ವಾಸ್ತವ್ಯ ಹಮ್ಮಿಕೊಂಡು, ಗ್ರಾಮಸ್ಥರಿಂದ ಕುಂದುಕೊರತೆಗಳನ್ನು ಆಲಿಸಿದರು.

ಶಾಸಕ ಉಮನಾಥ್ ಕೋಟ್ಯಾನ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಭೂ ದಾಖಲೆಗಳ ಉಪನಿರ್ದೇಶಕ ನಿರಂಜನ್, ಅಧಿಕಾರಿಬೆಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷ ಮನೋಹರ್ ಕೋಟ್ಯಾನ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net