

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ ಮಳೆ ಹಾನಿ ಪರಿಹಾರ, ಹೊಸ ಮನೆ ಮಂಜೂರಾತಿಗೆ ಜಿಲ್ಲಾಧಿಕಾರಿಗೆ ಅಧಿಕಾರ ನೀಡಲಾಗಿದೆ. ಮಳೆ ಹಾನಿಗೆ ಯಾವುದೇ ವಿಳಂಬವಿಲ್ಲದೆ ತುರ್ತು ಪರಿಹಾರ ವಿತರಣೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗಾಳಿ-ಮಳೆಯಿಂದಾಗಿ ಸಂಪೂರ್ಣ ಹಾನಿಗೀಡಾಗಿರುವ ಕಾಪು ಪುರಸಭಾ ವ್ಯಾಪ್ತಿಯ ಪಡು ಗ್ರಾಮದ ಗುಲಾಬಿ ಬಂಗೇರ ಮನೆಗೆ ಬುಧವಾರ ಭೇಟಿ ನೀಡಿ, ಪರಿಶೀಲಿಸಿ ಪರಿಹಾರ ಮಂಜೂರಾತಿ ಪತ್ರ ನೀಡಿ ವಾತನಾಡಿದರು. ಮಳೆಯಿಂದಾಗಿ ಸಂಪೂರ್ಣ ಹಾನಿಗೀಡಾಗಿರುವ ಮನೆಗಳಿಗೆ 1.20 ಲಕ್ಷ ರೂ.ಪರಿಹಾರ ವಿತರಿಸಲಾಗುತ್ತದೆ. ಜತೆಗೆ ಅಂತಹ ಕುಟುಂಬಗಳಿಗೆ ವಸತಿ ಯೋಜನೆಯಡಿ ಮನೆ ಮಂಜೂರು ವಾಡಿ ಅನುದಾನ ನೀಡಲಾಗುತ್ತಿದೆ. ಹೊಸ ಮನೆಗೆ ತಹಸೀಲ್ದಾರರಿಂದ ಪ್ರಸ್ತಾವನೆ ಬರಬೇಕು. ಜಿಲ್ಲಾಧಿಕಾರಿ ಅದನ್ನು ಮಂಜೂರು ವಾಡುತ್ತಾರೆ. ಇನ್ನು ಸರ್ಕಾರವನ್ನು ಕಾಯಬೇಕಾಗಿಲ್ಲ ಎಂದರು. ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್, ವಾಜಿ ಸಚಿವ ವಿನಯ್‌ಕುವಾರ್ ಸೊರಕೆ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕ್ರಂ ಕಾಪು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್‌ಕುವಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಸುಕುವಾರ್ ಮತ್ತಿತರರು ಉಪಸ್ಥಿತರಿದ್ದರು.
ಕಾಪು ತಾಲೂಕಿನಲ್ಲಿ 4 ಮನೆಗಳು ಪೂರ್ಣ ಹಾನಿಯಾಗಿದ್ದು, 58 ಮನೆಗಳು ಭಾಗಶಃ ಹಾನಿಗೀಡಾಗಿವೆ. ಈಗಾಗಲೇ ಮೂರು ಮನೆಗಳಿಗೆ 1.20 ಲಕ್ಷ ರೂ.ನಂತೆ ಪರಿಹಾರ ವಿತರಿಸಲು, ಭಾಗಶಃ ಹಾನಿಗೊಳಗಾದ ಮನೆಗಳಿಗೂ ಪರಿಹಾರ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಪ್ರತಿಭಾ ಆರ್. ಸಚಿವರಿಗೆ ವಾಹಿತಿ ನೀಡಿದರು.