ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ,ಪಿಎಫ್, ಇಎಸ್ಐ ಕಡ್ಡಾಯ;ಡಿಸಿ ನಿತೇಶ ಪಾಟೀಲ ಸೂಚನೆ

IMG-20230711-WA0010.jpg
Published on


ಬೆಳಗಾವಿ:ಪ್ರತಿಯೊಬ್ಬ ಹೊರ ಗುತ್ತಿಗೆ ನೌಕರರು ಕಡ್ಡಾಯವಾಗಿ ಭವಿಷ್ಯ ನಿಧಿ, ಇ.ಎಸ್‌.ಐ ಮತ್ತಿತರ ಖಾತೆಗಳನ್ನು ಹೊಂದಿರುವುದನ್ನು ಕೂಡ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು,
ಹೊರ ಗುತ್ತಿಗೆ ನೌಕರರ ವೇತನವು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಆಗುವಂತೆ ಹೊರ ಗುತ್ತಿಗೆ ನೀಡಿರುವ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಹೊರಗುತ್ತಿಗೆ ಕಾರ್ಮಿಕರಿಗೆ ಮೂಲ ವೇತನ ಹಾಗೂ ತುಟ್ಟಿಭತ್ಯೆಯನ್ನು ಪಾವತಿಸಬೇಕಾಗುತ್ತದೆ. ಈ ವೇತನದಲ್ಲಿ ಇಎಸ್ ಐ, ಪಿಎಫ್, ವೃತ್ತಿ ತೆರಿಗೆಯನ್ನು ಕಟಾಯಿಸಿ ನಿವ್ವಳ ವೇತನವನ್ನು ಪಾವತಿಸಬೇಕು ಎಂದು ಕಾರ್ಮಿಕ ಇಲಾಖೆಯ ಉಪ ಆಯುಕ್ತರಾದ ನಾಗೇಶ್ ಅವರು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net