ಪ್ರಜಾಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಡಿಸಿ

DC inspected the site for the construction of the public building
ಕೊಲ್ಹಾರದಲ್ಲಿ ಮಿನಿವಿಧಾನಸೌಧ ನಿರ್ಮಾಣಕ್ಕೆ ಡಿಸಿ ಟಿ. ಭೂಬಾಲನ ಸ್ಥಳ ಪರಿಶೀಲಿಸಿದರು. ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ತಹಸೀಲ್ದಾರ್​ಎಸ್​.ಎಸ್​. ನಾಯಕಲಮಠ ಇತರರಿದ್ದರು.
Published on

ಕೊಲ್ಹಾರ: ಪಟ್ಟಣಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಸರ್ಕಾರಿ ಕಚೇರಿಗಳ ಪರಿವೀಣೆ ನಡೆಸಿದರು.

ಪಟ್ಟಣದಲ್ಲಿ ಪ್ರಜಾ ಸೌಧ (ಮಿನಿ ವಿಧಾನಸೌಧ) ನಿರ್ಮಿಸಲು ಸ್ಥಳ ಪರಿಶೀಲಿಸಿದರು.

ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ಹಾಗೂ ಉರ್ದು ಪ್ರಾಥಮಿಕ ಶಾಲೆ ಆವರಣದ ಸ್ಥಳ ಪರಿಶೀಲನೆಗೆ ಬಂದಾಗ ಇಲ್ಲಿ ಪ್ರಜಾ ಸೌಧ ನಿರ್ಮಿಸಲು ಸ್ಥಳಿಯರು ವಿರೋಧ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿ ಎಂದು ಸ್ಥಳಿಯರು ಮನವಿ ಮಾಡಿದರು.

ನಂತರ ಸರ್ಕಾರಿ ಉರ್ದು ಗಂಡು ಮಕ್ಕಳ ಶಾಲೆಗೆ ತೆರಳಿ ಮಕ್ಕಳ ಕಲಿಕೆ ವೀಕ್ಷಿಸಿದರು. ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದರು.

ಮೈಕ್ರೋ ೈನಾನ್ಸ್​ ಹಾವಳಿ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ದೌರ್ಜನ್ಯ ದಬ್ಬಾಳಿಕೆ ನಡೆಸಿದಲ್ಲಿ ಸ್ಥಳಿಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದರೆ ಸೂಕ್ತ ಕ್ರಮ ಕೈಗೊಳ್ಳವುದಾಗಿ ಭರವಸೆ ನೀಡಿದರು.

ಸಾರ್ವಜನಿಕ ಶೌಚಗೃಹ, ಸರ್ಕಾರಿ ಪ್ರೌಢಶಾಲೆಗೆ ಸುತ್ತುಗೋಡೆ ನಿರ್ಮಿಸಬೇಕು ಎಂದು ಎಸ್​ಡಿಎಂಸಿ ಅಧ್ಯಕ್ಷ ಕಲ್ಲಪ್ಪ ಪಡಸಲಗಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ತಹಸೀಲ್ದಾರ್​ಎಸ್​.ಎಸ್​. ನಾಯಕಲಮಠ, ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದೀನ್​, ಕೆಬಿಜೆನಲ್​ ಕಾರ್ಯನಿರ್ವಾಹಕ ಅಭಿಯಂತರ ಎಸ್​.ಎಸ್​. ಶೀಲವಂತ, ಮುಖ್ಯಾಧಿಕಾರಿ ಉಮೇಶ ಚಲವಾದಿ, ಹೆಸ್ಕಾಂ ಅಧಿಕಾರಿ ಎಸ್​.ಎಸ್​. ಪಡಸಲಗಿ, ೇತ್ರ ಶಿಣಾಧಿಕಾರಿ ವಸಂತ ರಾಠೋಡ, ಶಿಶು ಅಭಿವೃದ್ಧಿ ಅಧಿಕಾರಿ ಶಿಲ್ಪಾ ಹಿರೇಮಠ, ಪಟ್ಟಣ ಪಂಚಾಯಿತಿ ಸದಸ್ಯ ಸಿ.ಎಸ್​. ಗಿಡ್ಡಪ್ಪಗೋಳ, ಮಹಾಂತೇಶ ಗಿಡ್ಡಪ್ಪಗೋಳ, ಶ್ರೀಶೈಲ ಮುಳವಾಡ, ತೌಸ್​ೀ ಗಿರಗಾಂವಿ, ಎಂ.ಆರ್​. ಕಲಾದಗಿ, ರವಿ ಗೊಳಸಂಗಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net