ನಿಗಧಿತ ಸಮಯದಲ್ಲಿ ಗುರಿ ಸಾಧಿಸುವಂತೆ ಡಿಸಿ ಸೂಚನೆ

31 ckm 6
ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ ೧೫ ಅಂಶಗಳ ಅನುಷ್ಠಾನಕ್ಕೆ ಸಂಬAಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಎಸ್‌ಪಿ ಕೃಷ್ಣಮೂರ್ತಿ, ಬಲರಾಂ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಪ್ರತಿ ಇಲಾಖೆಯ ಅಧಿಕಾರಿಗಳಿಗೆ ನಿಗಧಿಪಡಿಸಿದ ಗುರಿಯನ್ನು ನಿಗಧಿತ ಸಮಯದಲ್ಲಿ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ ೧೫ ಅಂಶಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಹಾಗೂ ಕುಟುಂಬಗಳಿಗೆ ಸರ್ಕಾರ ನಿಗಧಿಪಡಿಸಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ನೀಡಬೇಕು ಎಂದರು.
ಅಲ್ಪಸAಖ್ಯಾತರ ಹಾಸ್ಟೆಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಅವರಿಗೆ ವೃತ್ತಿ ಕೌಶಲ್ಯ ಶಿಕ್ಷಣ ನೀಡುವಂಥ ಯೋಜನೆಗಳನ್ನು ಕೈಗೊಳ್ಳಬೇಕು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಅರಿವು ಯೋಜನೆಯ ಸದುಪಯೋಗವನ್ನು ಅರ್ಹರು ಪಡೆದುಕೊಳ್ಳುವಂತೆ ತಿಳಿಸಿದರು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ವಿದ್ಯಾರ್ಥಿ ವೇತನ ನೀಡಲು ಕ್ರಮಕೈಗೊಳ್ಳಬೇಕು ಹಾಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪ್ರಯೋಜಿತ ಕಾರ್ಯಕ್ರಮಗಳು, ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾಮಗಾರಿಗಳು ನಿಗಧಿತ ಸಮಯಕ್ಕೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು. ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಅಧಿಕಾರಿಗಳು ಗಮನಹರಿಸಬೇಕು. ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳಿಗೆ ವಿವಿಧ ಸ್ವಯಂ ಉದ್ಯೋಗ ಕೈಗೊಳ್ಳಲು ಅರಿವು ಮೂಡಿಸಬೇಕು ಹಾಗೂ ವಸತಿ ಯೋಜನೆಯಲ್ಲಿ ಈ ಸಮುದಾಯಕ್ಕೆ ನಿಗಧಿಪಡಿಸಿದ ಗುರಿಯನ್ನು ಸಾಧಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಎಎಸ್‌ಪಿ ಕೃಷ್ಣಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ವಿವಿಧ ಸಮುದಾಯಗಳ ಮುಖಂಡರುಗಳ ೩೮ ಸಭೆಗಳನ್ನು ಮಾಡಿ ವಿವಿಧ ರೀತಿಯ ೩೧ ಪ್ರಕರಣಗಳು ದಾಖಲಾಗಿದೆ. ವಿವಿಧ ಪ್ರಕರಣಗಳು ನ್ಯಾಯಾಲಯದಲ್ಲಿ ಇವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಬಲರಾಂ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net