ಎರಡು ದಿನ ಶ್ರೀಕ್ಷೇತ್ರ ಸುಬ್ರಹ್ಮಣ್ಯಕ್ಕೆ ಬರಬೇಡಿ, ಭಕ್ತರಿಗೆ ದ.ಕ.ಜಿಲ್ಲಾಧಿಕಾರಿ ಸೂಚನೆ

kukke new
Published on

ಸುಬ್ರಹ್ಮಣ್ಯ: ಭಾರಿ ಮಳೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾಗಿರುವ ಜಲಪ್ರಳಯದಿಂದಾಗಿ ಎರಡು ದಿನ ಶ್ರೀಕ್ಷೇತ್ರ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಬೇಡಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಭಕ್ತರಿಗೆ ಸೋಮವಾರ ಸೂಚಿಸಿದ್ದಾರೆ.

ಇನ್ನೊಂದೆಡೆ, ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಮುಂಜಾಗರೂಕತಾ ಕ್ರಮ ತೆಗೆದುಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಸೂಚಿಸಿದ್ದಾರೆ.

ನೆರೆ ಸಂದರ್ಭ ಸಾರ್ವಜನಿಕರು ಸಹಕರಿಸಿ, ಸುರಕ್ಷತೆ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿರುವ ಅವರು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ಒಂದೆರಡು ದಿನಗಳು ಕಾದು ಮಳೆ ಕಡಿಮೆಯಾದ ಬಳಿಕ ಕ್ಷೇತ್ರ ಸಂದರ್ಶಿಸುವಂತೆ ಮನವಿ ಮಾಡಿದ್ದಾರೆ.

ಘಟ್ಟದ ತಪ್ಪಲಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಪ್ರದೇಶ ಭಾರಿ ಮಳೆ ಪರಿಣಾಮ ಜಲಾವೃತಗೊಂಡಿದೆ. ಕೆಲವು ಸೇತುವೆಗಳೂ ಮುಳುಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net