ಮಳೆಗಾಲದಲ್ಲಿ ಹೊಸ ಕಾಮಗಾರಿ ನಡೆಸದಂತೆ ಡಿ.ಸಿ. ಸೂಚನೆ

ಮಂಗಳೂರು ಮಹಾ ನಗರಪಾಲಿಕೆ ವ್ಯಾಪ್ತಿಯ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿಅವರು ಮಾತನಾಡಿದರು.
ಮಂಗಳೂರು ಮಹಾ ನಗರಪಾಲಿಕೆ ವ್ಯಾಪ್ತಿಯ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿಅವರು ಮಾತನಾಡಿದರು.
Published on
ಮಂಗಳೂರು : ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ಮಹಾ ನಗರಪಾಲಿಕೆ ವ್ಯಾಪ್ತಿಯ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಕೈಗೆತ್ತಿಕೊಳ್ಳಲಾದ ವಿವಿಧ ಯೋಜನೆಗಳಲ್ಲಿ ಅಗೆದಿರುವ ರಸ್ತೆಗಳನ್ನು ತಕ್ಷಣ ಯಥಾಸ್ಥಿತಿಗೆ ತರಬೇಕು. ಮಳೆ ನೀರಿನ ಸರಾಗ ಹರಿವಿಗೆ ತೊಂದರೆಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಕು ಎಂದು ಅವರು ಹೇಳಿದರು.
ಖಾಸಗಿ ಕಟ್ಟಡ ಕಾಮಗಾರಿ ನಿರ್ಮಾಣ ಸಾಮಗ್ರಿಗಳನ್ನು ಮತ್ತು ಅವಶೇಷಗಳನ್ನು ರಸ್ತೆ ಬದಿ ಹಾಗೂ ಫುಟ್‌ಪಾತ್‌ನಲ್ಲಿ ಹಾಕಿರುವುದನ್ನು ತಕ್ಷಣ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅಪಾಯಕಾರಿ ಮರಗಳನ್ನು ತಕ್ಷಣ ತೆರವುಗೊಳಿಸಬೇಕು. ತೀವ್ರ ಮಳೆಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆಯನ್ನು 48 ಗಂಟೆಯೊಳಗೆ ನಡೆಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ರಾಜು ಕೆ ಮಾತನಾಡಿ, ಮಳೆಗಾಲ ಮತ್ತು ವಿಪತ್ತು ನಿರ್ವಹಣೆಗೆ ನೇಮಕವಾದ ಸರ್ಕಾರಿ ನೌಕರರು ಕರ್ತವ್ಯ ನಿರ್ಲಕ್ಷ್ಯ ತೋರಿದರೆ ಅವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದರು. ಉಪ ಪೋಲಿಸ್ ಆಯುಕ್ತ ಮಿಥುನ್ ಎಚ್ ಎನ್, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net