

ಕಾರವಾರ: ಅಂಗನವಾಡಿಗಳು, ಜನವಸತಿ ಪ್ರದೇಶಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ, ಅಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಂಡು ಎರಡು ದಿನದಲ್ಲಿ ವರದಿ ನೀಡುವಂತೆ ಕಂದಾಯ ಇಲಾಖೆಯ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ವಿಪತ್ತು ನಿರ್ವಹಣಾ ಸಮಿತಿಯ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳ ಸಮೀಪ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ಶಿಥಿಲವಾದ ಕಾಂಪೌಂಡ್ ಗೋಡೆ, ಶಾಲಾ ಕಟ್ಟಡ ಹಾಗೂ ಗುಡ್ಡ ಕುಸಿತ ಸಂಭವಿಸುವ ಪ್ರದೇಶಗಳ ಬಳಿಯಲ್ಲಿ ವಾಸ ಮಾಡುತ್ತಿರುವ ಸಾರ್ವಜನಿಕರ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಆ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಹಾಗೂ ಕಾಳಜಿ ಕೇಂದ್ರಗಳನ್ನು ಗುರುತಿಸಿಟ್ಟುಕೊಂಡು, ಈ ಕುರಿತ ಸಂಪೂರ್ಣ ವರದಿಯನ್ನು ಸಂಬಂದಪಟ್ಟ ಅಽಕಾರಿಗಳು ಸಹಿ ಮಾಡಿ ದೃಢೀಕರಿಸಿ ಸಲ್ಲಿಸುವಂತೆ ಸೂಚಿಸಿದರು.
ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮತ್ತು ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಲಿಖಿತವಾಗಿ ಸೂಚನೆಗಳನ್ನು ನೀಡಿ, ಅವರಿಂದ ಸಹಿ ಪಡೆಯಿರಿ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರತಿಯೊಂದು ಮನೆಗಳನ್ನು ಸರ್ವೆ ಮಾಡಿ ಎಂದು ಸೂಚಿಸಿದರು. ಜಿಲ್ಲೆಯಲ್ಲಿನ ಎಲ್ಲ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಹಿಸುವ ಇಲಾಖೆಗಳು ತಮ್ಮ ಬಳಿ ಇರುವ ಯಂತ್ರೋಪಕರಣಗಳು ಹಾಗೂ ವಾಹನ ಚಾಲಕರು ಮತ್ತು ಮಾಲೀಕರ ಸಂಪೂರ್ಣ ವಿವರಗಳನ್ನು ಜಿಲ್ಲಾಽಕಾರಿ ಕಚೇರಿಗೆ ನೀಡುವಂತೆ ಸೂಚಿಸಿದರು. ಅಽಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗಬಾರದು ಎಂದ ಅವರು. ಎಸಿ ಹಾಗೂ ತಹಸೀಲ್ದಾರ್ ವಾಹನಗಳಿಗೂ ವೈರ್‌ಲೆಸ್ ಸಂಪರ್ಕ ಒದಗಿಸುವಂತೆ ಪೊಲೀಸ್ ಅಽಕಾರಿಗಳಿಗೆ ಸೂಚಿಸಿದರು. ಜಿಪಂ ಸಿಇಒ ಈಶ್ವರ ಕಾಂದೂ, ಎಸಿ ಕನಿಷ್ಕ, ಡಿಎಫ್‌ಒ ರವಿಶಂಕರ, ಎಡಿಸಿ ಪ್ರಕಾಶ ರಜಪೂತ, ಎಎಸ್‌ಪಿ ಜಗದೀಶ್ ಇದ್ದರು.