

ಮಂಡ್ಯ: ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಲಾನುಭವಿಗಳಿಗೆ ನೀಡುವ ಹಣವನ್ನು ಸಾಲಕ್ಕೆ ಕಟಾವು ಮಾಡಬಾರದು ಎಂದು ಬ್ಯಾಂಕರ್ಸ್ ಸಮಿತಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಪತ್ರ ಬರೆದಿದ್ದಾರೆ.
ಸರ್ಕಾರದಿಂದ ನೀಡಲಾಗುವ ಬರ ಪರಿಹಾರ ಹಣ, ಹಾಲು ಖರೀದಿ ಪ್ರೋತ್ಸಾಹ ಧನ, ಗೃಹಲಕ್ಷ್ಮೀ, ಅನ್ನಭಾಗ್ಯ, ಮನರೇಗಾ ಕೂಲಿ ಹಣವನ್ನು ಬ್ಯಾಂಕಿನವರು ಸಾಲಕ್ಕೆ ಕಟಾವು ಮಾಡಿಕೊಳ್ಳುವಂತಿಲ್ಲ ಎಂದು ಈಗಾಗಲೇ ಸೂಚನೆ ನೀಡಲಾಗಿರುತ್ತದೆ. ಆದಾಗ್ಯೂ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಯೋಜನೆಯಡಿ ನೀಡಲಾಗುತ್ತಿರುವ ಪ್ರೋತ್ಸಾಹ, ಸಬ್ಸಿಡಿ, ಕೂಲಿ, ಪರಿಹಾರ ಹಣವನ್ನು ಸಾಲಕ್ಕೆ ಕಟಾವು ಮಾಡುತ್ತಿರುವುದಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿವೆ.
ಇನ್ನು ಮುಂದೆ ಇಂತಹ ದೂರುಗಳು ಬಂದಲ್ಲಿ ಬ್ಯಾಂಕಿನವರು ಸಾಲಕ್ಕೆ ಕಟಾವು ಮಾಡಿಕೊಂಡ ಹಣವನ್ನು 3 ದಿನದೊಳಗಾಗಿ ಕಟಾವು ಮಾಡಿಕೊಂಡ ಖಾತೆಗೆ ಜಮೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಕೆನರಾ ಬ್ಯಾಂಕ್‌ನ ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿಯ ಕನ್ವೇನರ್ ಅವರಿಗೆ ಪತ್ರದಲ್ಲಿ ಸೂಚನೆ ನೀಡಿದ್ದಾರೆ.