

ತುಮಕೂರು : ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಬಾರದು, ಡೈರೆಕ್ಟರ್ ಜನರಲ್ ಆಫ್ ಮೈನ್ ಸೇಫ್ಟಿ ಅನ್ವಯ ಯಾವುದೇ ಅವಡ ಸಂಭವಿಸದಂತೆ ಗಣಿಗಾರಿಕೆ ನಡೆಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಟಾಸ್ಕ್ ಫೋರ್ಸ್(ಗಣಿ) ಮತ್ತು ಜಿಲ್ಲಾ ಕಲ್ಲುಪುಡಿ ವಾಡುವ ಟಕಗಳ ಲೈಸೆನ್ಸ್ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನಿಯಮಗಳ ಪ್ರಕಾರವೇ ಗಣಿಗಾರಿಕೆಗೆ ಅವಕಾಶ ನೀಡಬೇಕು, ಗಣಿಗಾರಿಕೆ ನಡೆಸುವ ಸಂಬಂಧದ ನೀತಿನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಯಾವುದೇ ಸಮಸ್ಯೆ, ಅವಡ ಸಂಭವಿಸದಂತೆ ಗಣಿಗಾರಿಕೆ ನಡೆಸಲು ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.
ಅಕ್ರಮ ಗಣಿಗಾರಿಕೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಗಣಿಗಾರಿಕೆ ನಡೆಸಲು ಅನುಮತಿ ಪಡೆದಿರುವವರು ಸಂಜೆ 6 ರಿಂದ 7 ಗಂಟೆಯ ನಡುವಿನ ಒಂದು ಗಂಟೆ ಅವಧಿಯಲ್ಲಿ ಬ್ಲಾಸ್ಟ್ ವಾಡಬೇಕು. ಉಳಿದ ಯಾವುದೇ ಸಮಯದಲ್ಲಿಯೂ ಬ್ಲಾಸ್ಟ್ ವಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು. ಉಪವಿಭಾಗಾಧಿಕಾರಿ ಅಜಯ್, ಸಾವಾಜಿಕ ಅರಣ್ಯ ಉಪ ವಿಭಾಗದ ಸಂರಕ್ಷಣಾಧಿಕಾರಿ ರಮೇಶ್, ಪಾಲಿಕೆ ಆಯುಕ್ತೆ ರೇಣುಕಾ ಇತರರಿದ್ದರು.
ಮರಳು ದಂಧೆಗೆ ಬ್ರೇಕ್ ಹಾಕಿ : ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿ ನೀಡುತ್ತಿಲ್ಲ. ಅಕ್ರಮ ಮರಳುಗಾರಿಕೆ ನಡೆಯುವುದು ಕಂಡುಬಂದ ಕೂಡಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್ ಮಾತನಾಡಿ ಹೇಳಿದರು. ಮರಳು ವಾಫಿಯಾ ಕಂಡು ಬಂದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತಹಸೀಲ್ದಾರ್, ಪಿಡಿಒ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮರಳು ವಾಫಿಯಾ ಮತ್ತು ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ವಿರುದ್ಧ ಸಾರ್ವಜನಿಕರಿಂದ ದೂರು ಬಂದ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು ಎಂದು ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಿಯಮ ಮೀರಿ ಗಣಿಗಾರಿಕೆ ನಡೆಸಲು ಪರವಾನಗಿ ನೀಡಬಾರದು, ವನ್ಯಜೀವಿ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನನ್ನು ಮೀರಿ ಗಣಿಗಾರಿಕೆ ನಡೆಸಲು ಅವಕಾಶ ಕೊಡಬಾರದು. ಡಾ.ಕೆ.ವಿದ್ಯಾಕುವಾರಿ ಜಿಪಂ ಸಿಇಒ ಭವಿಷ್ಯದಲ್ಲಿ ಯಾವುದೇ ತೊಂದರೆಗಳು ಎದುರಾಗದಂತೆ, ಅವಡಗಳು ಸಂಭವಿಸದ ರೀತಿಯಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡಬೇಕು. ಗಣಿಗಾರಿಕೆ ಸಂಬಂಧ ಜಿಲ್ಲೆಗೆ ಯಾವುದೇ ಸಲಕರಣೆಗಳು ಬಂದರೂ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಗಮನಕ್ಕೆ ತರಬೇಕು. ರಾಹುಲ್ ಕುವಾರ್ ಶಹಾಪುರವಾಡ್ ಎಸ್‌ಪಿ