ನೋಂದಣಿ ಪ್ರಕ್ರಿಯೆ ವಿಳಂಬ ಮಾಡುವಂತಿಲ್ಲ

dc meeting
ದೇವನಹಳ್ಳಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನನ-ಮರಣ ನೋಂದಣಿ ಕಾರ್ಯ ಹಾಗೂ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮಾತನಾಡಿದರು.ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಲಕ್ಷ್ಮಿಕಾಂತ ಮತ್ತಿತರರಿದ್ದರು.
Published on

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚನೆ

ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸರ್ಕಾರದ ಮಾರ್ಗಸೂಚಿಯಂತೆ ಜನನ-ಮರಣ ನೋಂದಣಿಯನ್ನು ವಿಳಂಬ ಮಾಡದೆ ನಿಯಮಾನುಸಾರ ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ 2024-25 ನೇ ಸಾಲಿನ ಜನನ-ಮರಣ ನೋಂದಣಿ ಕಾರ್ಯ ಹಾಗೂ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 1110 ಜನನ ಮರಣ ನೋಂದಣಿ ಘಟಕಗಳಿದ್ದು, ಗ್ರಾಮೀಣ ಪ್ರದೇಶದಲ್ಲಿ 1100 ಹಾಗೂ ನಗರ ಪ್ರದೇಶದಲ್ಲಿ 10 ನೋಂದಣಿ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. 2024 ನೇ ಸಾಲಿನ ಜನವರಿಯಿಂದ ಮೇವರೆಗೆ 3664 ಜನನ ಹಾಗೂ 4113 ಮರಣ ಸೇರಿ 7777 ಜನನ-ಮರಣ ನೋಂದಣಿಯಾಗಿದೆ ಎಂದು ಮಾಹಿತಿ ನೀಡಿದರು. ಜನನ ಮರಣ ನೋಂದಣಿ ಪಾರದರ್ಶಕವಾಗಿ ನಡೆಯಬೇಕು. ಜಿಲ್ಲೆಯಲ್ಲಿರುವ ಎಲ್ಲ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳಲ್ಲಿ ಜನನ ಮರಣ ನೋಂದಣಿ ಉಪ ನೋಂದಣಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಘಟಕಗಳಲ್ಲಿ ಕಡ್ಡಾಯವಾಗಿ ಪರಿಶೀಲನೆ ನಡೆಸಿ ಆನ್‌ಲೈನ್‌ನಲ್ಲಿ ನಿಗದಿತ ಸಮಯದೊಳಗೆ ನೋಂದಾಯಿಸಬೇಕು ಎಂದು ಸೂಚಿಸಿದರು.
ತಪಾಸಣೆ ನಡೆಸಬೇಕು: ಜಿಲ್ಲೆಯಲ್ಲಿರುವ ಆಯಾ ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತಹಸೀಲ್ದಾರ್, ತಾಲೂಕು ಆರೋಗ್ಯಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಾಲ ಕಾಲಕ್ಕೆ ಭೇಟಿ ನೀಡಿ ಜನನ ಮರಣ ನೋಂದಣಿ ಘಟಕಗಳನ್ನು ತಪಾಸಣೆ ಮಾಡಬೇಕು. ಪ್ರತಿ ತಿಂಗಳಿಗೊಮ್ಮೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಜನನ ಮರಣ ವಿಷಯಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿ ವರದಿ ನೀಡಬೇಕು ಎಂದು ಡಿಸಿ ಹೇಳಿದರು.ಈ ಜನ್ಮ ತಂತ್ರಾಂಶದ ಆನ್‌ಲೈನ್ ಅಪ್ಲಿಕೇಷನ್‌ನಲ್ಲಿ ಎಂಟ್ರಿ ಮಾಡಿದ ಮಾಹಿತಿಗಳನ್ನು ಆಸ್ಪತ್ರೆಯ ವೈದ್ಯಾಧಿಕಾರಿಗಳು ಪರಿಶೀಲಿಸಿ ಅನುಮೋದಿಸಬೇಕು. ನೋಂದಣಾಧಿಕಾರಿ, ಉಪನೊಂದಣಾಧಿಕಾರಿಗಳು ನಿರ್ವಹಿಸುವ ಕೆಲಸಗಳನ್ನು ವೈದ್ಯಾಧಿಕಾರಿಗಳು ಸಹ ನಿರ್ವಹಿಸುತ್ತಾರೆ ಮಾಹಿತಿಗಳು ಅನುಮೋದಿಸಿ ಡಿಜಿಟಲ್ ಸಹಿ ನಂತರ ಜನನ ಮರಣ ಪ್ರಮಾಣ ಪತ್ರಗಳನ್ನು ಸೃಜಿಸಿ ಸಂಬಂಧ ಪಟ್ಟ ವಿಷಯ ನಿರ್ವಾಹಕರು ವಿತರಿಸಬೇಕ ಎಂದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಜನನ-ಮರಣ ನೋಂದಣಿ ಅಧಿಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಸರ್ಕಾರ ಜನನ ಮರಣ ಉಪನಂದನಾಧಿಕಾರಿಗಳಾಗಿ ನೇಮಿಸಿದ್ದು ಮುಂದಿನ ದಿನಗಳಲ್ಲಿ ಉಪನೋಂದಾಣಿಧಿಕಾರಿಗಳು ಜವಾಬ್ದಾರಿ ವಹಿಸಿಬೇಕು ಘಟನೆ ಸಂಭವಿಸಿದ 30 ದಿನಗಳ ಒಳಗೆ ಈ ಜನ್ಮ ತಂತ್ರಾಂಶದಲ್ಲಿ ನೋಂದಾಯಿಸಿ ಯಾವುದೇ ತಪ್ಪಿಲ್ಲದೆ ಸಾರ್ವಜನಿಕರಿಗೆ ಪ್ರಮಾಣ ಪತ್ರಗಳನ್ನು ವಿಸ್ತರಿಸಲು ಕ್ರಮವಹಿಸಬೇಕು ಎಂದರು.
ಕೃಷಿ ಗಣತಿ ಗಮನವಿರಲಿ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net