ಸ್ವಾತಂತ್ರ್ಯೋತ್ಸವವನ್ನು ವರ್ಣರಂಜಿತಗೊಳಿಸಬೇಕು

hargar tiranga
ದೇವನಹಳ್ಳಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹರ್‌ಘರ್ ತಿರಂಗಾ ಅಭಿಯಾನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮಾತನಾಡಿದರು. ಜಿಪಂ ಸಿಇಒ ಡಾ.ಕೆ.ಎನ್.ಅನುರಾಧಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಮತ್ತಿತರರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ದೇಶಾದ್ಯಂತ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಹರ್‌ಘರ್ ತಿರಂಗಾ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಆಚರಿಸಲು ಅಧಿಕಾರಿಗಳು ಪೂರ್ವ ಸಿದ್ದತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತಭವನದಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹರ್‌ಘರ್ ತಿರಂಗಾ ಸ್ವಾತಂತ್ರ್ಯ ದಿನಾಚಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಸ್ವಾತಂತ್ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದ್ದು, ಈ ಸಂಭ್ರಮದ ಒಂದು ಭಾಗವಾಗಿ ಹರ್‌ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ 2024 ರ ಆ.13 ರಿಂದ 15 ರವರೆಗೆ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ, ದೇಶ ಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಿದರು. ಈ ಹಿನ್ನೆಲೆಯಲ್ಲಿ ಹರ್‌ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ:
ಶಾಲಾ-ಕಾಲೇಜುಗಳಲ್ಲಿ ಹರ್‌ಘರ್ ತಿರಂಗಾ ಅಭಿಯಾನದಡಿ ರಾಷ್ಟ್ರಧ್ವಜದ ಮಹತ್ವದ ಕುರಿತು ಚರ್ಚಾ ಸ್ಫರ್ಧೆ ಸಂಗೀತ ಕಛೇರಿಗಳನ್ನು ಆಯೋಜಿಸುವುದು ಹಾಗೂ ಸ್ವಾತಂತ್ರಕ್ಕೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುತುವರ್ಜಿ ವಹಿಸಬೇಕು ಹಾಗೂ ತ್ರಿವರ್ಣ ಧ್ವಜಗಳನ್ನು ಹಿಡಿದು ಜಾಥಾ, ಮೆರವಣಿಗಳನ್ನು ಮಾಡಿ ಸ್ವಾತಂತ್ರೋತ್ಸವಕ್ಕೆ ಸಂಬಂಧಿಸಿದ ಗೀತ ಗಾಯನಗಳನ್ನು ಏರ್ಪಡಿಸುವ ಸಂಬಂಧ ಅಗತ್ಯ ಕ್ರಮವಹಿಸಿಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲ ಪಂಚಾಯಿತಿಗಳಲ್ಲಿ ಹರ್‌ಘರ್ ತಿರಂಗಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಬೈಕ್ ರ‌್ಯಾಲಿ, ಸೈಕಲ್ ರ‌್ಯಾಲಿ, ಇನ್ನಿತರ ವಾಹನಗಳ ಮೂಲಕ ರ‌್ಯಾಲಿ ನಡೆಸುವುದು, ಜಾಥಾ, ಮೆರವಣಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಪ್ರತಿ ಪಂಚಾಯಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯಂದು ಹರ್ ಘರ್ ತಿರಂಗ ಅಭಿಯಾನವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು. ಜತೆಗೆ ನಗರ ಹಾಗೂ ಗ್ರಾಮೀಣ ಪ್ರದೇಶದ ಸಾರ್ವಜನಿಕರು ತಮ್ಮ ಮನೆಗಳ ಮೇಲೆ ಆ.13 ರಿಂದ 15 ರ ವರೆಗೆ ತ್ರಿವರ್ಣ ಧ್ವಜವನ್ನು ಹಾರಿಸಿ, ತಿರಂಗ ಅಭಿಯಾನದ ಛಾಯಾಚಿತ್ರಗಳನ್ನು ಚ್ಟಜಚ್ಟಠಿಜ್ಟಿಚ್ಞಜ.್ಚಟಞ‘ ಡಿಛಿಚಿಜಿಠಿಛಿ ????? ್ಠಟ್ಝಟ ಅಪ್‌ಲೋಡ್ ಮಾಡಬಹುದಾಗಿದೆ. ಸಾರ್ವಜನಿಕರು ಈ ತಿರಂಗಾ ಅಭಿಯಾನದಲ್ಲಿ ಕೈ ಜೋಡಿಸಿ ಮನೆಗಳ ಮೇಲೆ ತಿರಂಗಾ ಧ್ವಜ ಹಾರಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಮನವಿ ಮಾಡಿದರು.
ರಾಷ್ಟ್ರಧ್ವಜದ ಬಗ್ಗೆ ನಿಗಾ ಇರಲಿ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net