

ಉಡುಪಿ: ಬಕ್ರೀದ್ ಹಬ್ಬದ ಆಚರಣೆ ಸಂದರ್ಭ ಸರ್ಕಾರದ ವಾರ್ಗಸೂಚಿ ಉಲ್ಲಂಸಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಟ ವಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಚ್ಚರಿಕೆ ನೀಡಿದರು.
ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಟ ತಡೆಗಟ್ಟುವ ಕುರಿತು ಆಯೋಜಿಸಿದ್ದ ಸಭೆಯಲ್ಲಿ ವಾತನಾಡಿದರು.
ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರು ವಧೆ ಹಾಗೂ ಸಾಗಾಟ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ವಾಹಿತಿ ನೀಡಬೇಕು. ಜಾನುವಾರು ಸಾಗಾಟ ಮಾಡುವುದಿದ್ದಲ್ಲಿ ಪಶುಸಂಗೋಪನಾ ಇಲಾಖೆ ನಿಗದಿಪಡಿಸಿದ ನಮೂನೆಯಂತೆ ಹಾಗೂ ವ್ಯಾಪ್ತಿಯ ಪೊಲೀಸ್ ಠಾಣೆಯ ಅನುಮತಿ ಪಡೆಯುವುದು ಕಡ್ಡಾಯ ಎಂದರು.
ಒಂದೊಮ್ಮೆ ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳನ್ನು ಸಂರಕ್ಷಿಸಲು ಸಮೀಪದ ಗೋಶಾಲೆಗಳನ್ನು ಗುರುತಿಸಬೇಕು. ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆ ನೀಡಲು ಪಶುವೈದ್ಯಾಧಿಕಾರಿಗಳು ಹಾಗೂ ಅಗತ್ಯವಿರುವ ಮೇವು ಮತ್ತು ನೀರು ಪೂರೈಸಲು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಪೋಲಿಸ್ ವರಿಷ್ಠ ಡಾ.ಅರುಣಕುಮಾರ್ ಕೆ. ವಾತನಾಡಿ, ಜಿಲ್ಲಾದ್ಯಂತ ಇರುವ ತಪಾಸಣಾ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಅಕ್ರಮವಾಗಿ ಜಾನುವಾರು ಸಾಗಣೆ ಮಾಡಲಾಗುತ್ತಿದೆಯೇ ಎಂದು ತಿಳಿಯಲು ಸದರಿ ಕೇಂದ್ರಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಕಾನೂನು ಉಲ್ಲಂಸಿ ಜಾನುವಾರು ಸಾಗಣೆ ವಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಎಎಸ್ಪಿ ಸಿದ್ದಲಿಂಗಪ್ಪ, ನಗರಸಭಾ ಪೌರಾಯುಕ್ತ ರಾಯಪ್ಪ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಬಕ್ರೀದ್ ಹಬ್ಬವನ್ನು ಶಾಂತಿಯುತ ಮತ್ತು ಸೌಹಾರ್ದಯುತವಾಗಿ ಆಚರಿಸಬೇಕು. ತಾಲೂಕು ಮಟ್ಟದಲ್ಲಿ ತಹಸೀಲ್ದಾರರು ಶಾಂತಿ ಸಭೆ ನಡೆಸಬೇಕು. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಟನೆ ನಡೆಯದಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಪಂ ವ್ಯಾಪ್ತಿಯಲ್ಲಿಯೂ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಡಾ.ಕೆ.ವಿದ್ಯಾಕುಮಾರಿ. ಜಿಲ್ಲಾಧಿಕಾರಿ ಉಡುಪಿ