ಲಾಟರಿ, ಮಟ್ಕಾ ದಂಧೆ ನಿಯಂತ್ರಿಸಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

1 (2)
Published on

ಮಂಡ್ಯ: ಲಾಟರಿ ಮಾರಾಟ ಹಾಗೂ ಮಟ್ಕ ಹಾವಳಿ ನಿಯಂತ್ರಿಸುವ ಬಗ್ಗೆ ಪೊಲೀಸ್ ಇಲಾಖೆ ಸನ್ನದ್ಧರಾಗಬೇಕು. ಪ್ರಮುಖವಾಗಿ ಲಾಟರಿ ಮಾರಾಟ ಕಂಡು ಬಂದಲ್ಲಿ ತಕ್ಷಣ ದಾಳಿ ನಡೆಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಲಾಟರಿ ಮತ್ತು ಮಟ್ಕಾ ಹಾವಳಿ ನಿಯಂತ್ರಿಸುವ ಫ್ಲೈಯಿಂಗ್ ಸ್ಕ್ವಾಡ್ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಾಟರಿ ಹಾಗೂ ಮಟ್ಕಾದಂತಹ ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜತೆಗೆ ನಿಯಮಗಳ ಚೌಕಟ್ಟಿನಲ್ಲಿಯೇ ಅವುಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಶಾಲಾ-ಕಾಲೇಜು ಹಾಗೂ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಅರಿವು ಮೂಡಿಸುವ ಕೆಲಸವಾಗಲಿ. ಜತೆಗೆ ಈವರೆಗೂ ಆಗಿರುವ ಪ್ರಕರಣಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು. ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ತ್ರೀಶಕ್ತಿ ಗುಂಪಿನೊಂದಿಗೆ ಅಧಿಕಾರಿಗಳು ಚರ್ಚಿಸಿ ಅವರ ಸಹಕಾರದಿಂದ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದರು.

ಸಭೆಯಲ್ಲಿ ಲಾಟರಿ, ಮಟ್ಕಾ ನಿಯಂತ್ರಣಾಧಿಕಾರಿ ಗಿರೀಶ್, ಎಸ್ಪಿ ಕಚೇರಿಯ ಪೊಲೀಸ್ ಅಧಿಕಾರಿ ದೇವರಾಜು, ವಾಣಿಜ್ಯ ಇಲಾಖೆಯ ಶ್ರೀನಿವಾಸ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net