

ಬೆಳಗಾವಿ: ನೆರೆಯ ಮಹಾರಷ್ಟದ ಪಶ್ಚಿಮ ಘಟ್ಟ ಪ್ರದೇಶ, ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಒಟ್ಟು ೩೦ ಕೆಳಹಂತದ ಸೇತುವೆಗಳು ಮುಳುಗಡಯಾಗಿವೆ. ಕೃಷ್ಣಾ ನದಿಯಲ್ಲಿ ೧ ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಒಳಹರಿವು ಇದೆ. ಆದರೆ ಸದ್ಯಕ್ಕೆ ಪ್ರವಾಹ ಭೀತಿ ಇರುವುದಿಲ್ಲ ಎಂದು ಜಿಲ್ಲಾಽಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ಜರುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿಡಿಯೋ ಸಂವಾದಲ್ಲಿ ಮಾತನಾಡಿ, ಕೃಷ್ಣಾ, ಘಟಪ್ರಭಾ ನದಿಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕೆಳಹಂತದ ಸೇತುವೆಗಳು ಮುಳಗಡಯಾಗಿದ್ದರುಆದರೆ ಪರ್ಯಾಯ ಮಾರ್ಗಗಳು ಇರುವುದರಿಂದ ಸಂಚಾರಕ್ಕೆ ಯಾವುದೇ ರೀತಿಯಾಗಿರುವುದಿಲ್ಲ ಎಂದರು.
ಬೈಲಹೊಂಗಲ ಮನೆ ಕುಸಿದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು, ಕುಟುಂಬದ ವಾರಸುದಾರರಿಗೆ ಐದು ಲಕ್ಷ ರೂ.ಪರಿಹಾರ ನೀಡಲಾಗಿದೆ.ಜಿಲ್ಲೆಯಲ್ಲಿ ಇದುವರೆಗೆ ಐದು ಮನೆಗಳು ಪೂರ್ಣವಾಗಿ ಕುಸಿದಿವೆ. ೧೦೨ ಮನೆಗಳು ಭಾಗಶಃ ಹಾನಿಯಾಗಿರುತ್ತವೆ. ಸಂಪೂರ್ಣವಾಗಿ ಕುಸಿದಿರುವ ಮನೆಗಳಿಗೆ ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ ತಲಾ ೧.೨೦ ಲಕ್ಷ ರೂ.ಪರಿಹಾರ ನೀಡಲಾಗಿದೆ. ಕೆ.ಆರ್.ಐ.ಡಿ.ಸಿ.ಎಲ್. ವತಿಯಿಂದ ಐದು ದೊಡ್ಡ ಸೇತುವೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಇವು ಪೂರ್ಣಗೊಂಡರೆ ಮತ್ತಷ್ಟು ಸಮಸ್ಯೆ ಬಗೆಹರಿಯಲಿದೆ.
ನಿಪ್ಪಾಣಿಯಲ್ಲಿ ವೇದಗಂಗಾ-ದೂಧಗಂಗಾ ನದಿಯ ಒಳಹರಿವು ಹೆಚ್ಚಾಗಿರುವುದರಿಂದ ಅಗತ್ಯವಿರುವ ಎರಡು ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಕುಟುಂಬಗಳನ್ನು ಕೂಡ ಸ್ಥಳಾಂತರಿಸಲಾಗಿದೆ ಎಂದು ವಿವರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಡಾ.ಸಂಜೀವ ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ, ಜಿಪಂ ಸಿಇಒ ಹರ್ಷಲ್ ಭೋಯರ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಪ್ರೊಬೇಷನರಿ ಐಎಎಸ್ ಅಽಕಾರಿ ಶುಭಂ ಶುಕ್ಲಾ,ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಉಪ ವಿಭಾಗಾಽಕಾರಿಗಳಾದ ರಾಜೇಶ್ ನಾಯಕ, ಪ್ರಭಾವತಿ ಫಕೀರಪೂರ ಇತರರಿದ್ದರು.