ನಕಲಿ ವೈದ್ಯರು, ಕ್ಲಿನಿಕ್‌ಗಳಿಗೆ ಕಡಿವಾಣ ಹಾಕಿ ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ

30TMK_DC_Helath_Meeting
Published on

ತುಮಕೂರು : ವೈದ್ಯಕೀಯ ಅರ್ಹತೆ ಇಲ್ಲದಿದ್ದರೂ ವೈದ್ಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರು, ಕ್ಲಿನಿಕ್‌ಗಳಿಗೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ, ಜಿಲ್ಲಾ ಆರೋಗ್ಯ ಸಮಿತಿ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣ, ಜಿಲ್ಲಾ ತಂಬಾಕು ನಿಯಂತ್ರಣ ಸೇರಿದಂತೆ ವಿವಿಧ ಸಭೆಗಳ ಅಧ್ಯಕ್ಷತೆವಹಿಸಿ ವಾತನಾಡಿದ ಅವರು, ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ ತಪ್ಪಿಸಲು ಆರೋಗ್ಯ ಇಲಾಖೆ ಶ್ರೀವೇ ಕ್ರಮಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ 90 ನಕಲಿ ವೈದ್ಯರಿರುವ ಪ್ರಕರಣ ದಾಖಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ನಕಲಿ ವೈದ್ಯರ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ಹಾಗೂ ನಕಲಿ ಕ್ಲಿನಿಕ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಕಲಿ ವೈದ್ಯರ ಬಗ್ಗೆ ವಾಹಿತಿ ಸಿಕ್ಕ ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು. ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣಕ್ಕಾಗಿ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿರುವುದರೊಂದಿಗೆ ತಂಬಾಕು ವ್ಯಸನಿಗಳ ಪ್ರವಾಣ ಹೆಚ್ಚಾಗದಂತೆ ಕ್ರಮವಹಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶನದ ಮೇರೆಗೆ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಂಡು ತಂಬಾಕು ವ್ಯಸನಿಗಳಿಗೆ ಆಪ್ತ ಸವಾಲೋಚನೆ ಹಾಗೂ ಚಿಕಿತ್ಸೆ ನೀಡುವ ಮೂಲಕ ನಿಯಂತ್ರಣ ಸಾಧಿಸಬೇಕು. ಶಾಲೆಗಳಲ್ಲಿ ತಂಬಾಕು ನಿಯಂತ್ರಣ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಜಿಪಂ ಸಿಇಒ ಡಾ.ಕೆ.ವಿದ್ಯಾಕುವಾರಿ ವಾತನಾಡಿ, ಗ್ರಾಮೀಣ ಭಾಗಗಳಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಿಸದಂತೆ ಹೆಚ್ಚು ಅರಿವು ಮೂಡಿಸಬೇಕು ಎಂದು ತಿಳಿಸಿದರು. ಡಿಎಚ್‌ಒ ಡಾ.ನಾಗೇಂದ್ರಪ್ಪ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹಿವಾ, ಆರ್‌ಸಿಎಚ್ ಅಧಿಕಾರಿ ಡಾ.ಕೇಶವರಾಜ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುವಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಚೇತನ್, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ಮೋಹನ್‌ದಾಸ್ ಇದ್ದರು.

ತಾಯಿ, ಶಿಶು ಮರಣ ತಗ್ಗಿಸಿ : ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಮರಣದ ಪ್ರವಾಣವನ್ನು ದಿನದಿಂದ ದಿನಕ್ಕೆ ಕಡಿಮೆ ವಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಹೆಚ್ಚು ತಾಯಿಶಿಶು ಮರಣಗಳಾಗುತ್ತಿರುವ ಆಸ್ಪತ್ರೆಗಳನ್ನು ಗುರುತಿಸಿ ಅಂತಹ ಆಸ್ಪತ್ರೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅಗತ್ಯ ಅರಿವು ಮೂಡಿಸಬೇಕೆಂದರಲ್ಲದೆ ಜಿಲ್ಲೆಯಲ್ಲಿರುವ ಎಲ್ಲ ಮಕ್ಕಳಿಗೂ ಪೌಷ್ಟಿಕಾಹಾರ ಸಮರ್ಪಕವಾಗಿ ತಲುಪಿಸಬೇಕು ಎಂದು ಡಿಸಿ ವೈ.ಎಸ್.ಪಾಟೀಲ ಸೂಚಿಸಿದರು. ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಪರಿಸ್ಥಿತಿ ಕುರಿತು ಸಮಗ್ರ ವಾಹಿತಿ ಸದಾ ಲಭ್ಯವಿರುವಂತೆ ಜಿಲ್ಲೆಯಲ್ಲಿರುವ ಎಲ್ಲ ಗರ್ಭಿಣಿ, ಬಾಣಂತಿಯರ ನೋಂದಣಿಯನ್ನು ಕಡ್ಡಾಯವಾಗಿ ವಾಡಬೇಕು. ಇದರಿಂದ ಅವರಿಗೆ ತುರ್ತು ಸಂದರ್ಭಗಳಲ್ಲಿ ಸರಿಯಾದ ಆರೋಗ್ಯ ಸೇವೆ ಒದಗಿಸಲು ಸುಲಭವಾಗಲಿದೆ ಎಂದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿಯೇ ಹೆರಿಗೆಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು. ವಾಡಬೇಕು ಅಗತ್ಯವಿರುವ ಸಂದರ್ಭದಲ್ಲಿ ಸಿಜೇರಿಯನ್ ಹೆರಿಗೆ ವಾಡಬೇಕು. ಸಹಜ ಹೆರಿಗೆಗಳ ಪ್ರವಾಣ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು. ಜಿಲ್ಲೆಯಲ್ಲಿ ಕ್ಷಯ, ಕುಷ್ಟರೋಗ, ಎಚ್‌ಐವಿ ರೋಗಿಗಳಿಗೆ ಕಾಲ ಕಾಲಕ್ಕೆ ಸರಿಯಾಗಿ ಚಿಕಿತ್ಸೆ ನೀಡಬೇಕು. ಯಾವುದೇ ರೋಗಿಯೂ ಚಿಕಿತ್ಸೆಯಿಂದ ವಂಚಿತರಾಗಬಾರದು. ಚಿಕಿತ್ಸೆ ಜತೆಗೆ ಈ ಕಾಯಿಲೆ ಪ್ರವಾಣವನ್ನೂ ತಗ್ಗಿಸಲು ಅರಿವು ಮೂಡಿಸಬೇಕು ಎಂದು ನಿರ್ದೇಶಿಸಿದರು.

ನಾಯಿಗಳಿಗೆ ಸಂತಾನ ಶಕ್ತಿ ಹರಣ ಚಿಕಿತ್ಸೆ ನೀಡಿ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಪ್ರಕರಣ ಕಂಡು ಬರುತ್ತಿದ್ದು, ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು. ನಾಯಿಗಳ ಸಂತತಿ ಹೆಚ್ಚದಂತೆ ನಾಯಿಗಳಿಗೆ ಸಂತಾನ ಶಕ್ತಿ ಹರಣ ಚಿಕಿತ್ಸೆ ವಾಡಬೇಕು. ಪ್ರಸ್ತುತ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆಯನ್ನು ತಕ್ಷಣವೇ ವಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಡಿಸಿ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net