

ಮಂಡ್ಯ: ಜಿಲ್ಲೆಯಲ್ಲಿ ಡಿ.ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಆ.20, 21 ಮತ್ತು 22 ರಂದು ನಡೆಯುವುದರಿಂದ ಅರ್ಥಪೂರ್ಣವಾಗಿ ಆಚರಿಸೋಣ. ಕಾರ್ಯಕ್ರಮಕ್ಕೆ ಬೇಕಾದಂತಹ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವಥಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆ ಕಾರ್ಯಕ್ರಮವು ನಗರದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ (ಕಲಾಮಂದಿರದಲ್ಲಿ) ಆಯೋಜಿಸಲಾಗಿದೆ. ಆ.20 ರಂದು ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಿಂದ ಕಲಾಮಂದಿರದವರೆಗೆ ವಿವಿಧ ಸಾಂಸ್ಕøತಿಕ ಕಲಾತಂಡಗಳನ್ನು ಒಳಗೊಂಡಂತೆ ಮೆರವಣಿಗೆಯನ್ನು ಮಾಡಲಾಗುವುದು. ನಂತರ ವೇದಿಕೆ ಕಾರ್ಯಕ್ರಮ ನಡೆಯದೆ. ಡಿ.ದೇವರಾಜ ಅರಸು ರವರ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಸಹ ನಡೆಯಲಿದೆ ಎಂದರು.
21ರಂದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಕ್ರೀಡೆ ನಡೆಸಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು. 22 ರಂದು ಶಾಲಾ ಮಕ್ಕಳಿಗೆ ಅರಣ್ಯದ ಮಹತ್ವ ಬಗ್ಗೆ ತಿಳುವಳಿಕೆ ಮತ್ತು 107 ಗಿಡ ನೆಡುವ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ಸಲಹೆ ನೀಡಿದರು. ಸಭೆಯಲ್ಲಿ ಜಿ.ಪಂ ಸಿಇಒ ಶಾಂತಾ ಎಂ. ಹುಲ್ಮನಿ, ಉಪ ಅರಣ್ಯಸಂರಕ್ಷಣಾಧಿಕಾರಿ ರುಥ್ರೆನ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್ ನಾಗರಾಜು ಇತರರಿದ್ದರು.