

ಮಂಡ್ಯ: ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಯೋಜನೆಯಡಿ ಮನೆಗಳನ್ನು ನೀಡುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಕ್ರವಾರ ಸಭೆ ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಂದ ಒಟ್ಟು 31 ಅರ್ಜಿಗಳು ಸ್ವೀಕೃತಗೊಂಡಿದೆ. ಅದರಲ್ಲಿ 7 ಅರ್ಜಿಗಳು ಅವಶ್ಯಕ ದಾಖಲಾತಿ ನೀಡದಿರುವ ಕಾರಣ ತಿರಸ್ಕೃತಗೊಂಡವು. ಉಳಿದಂತೆ 24 ಅರ್ಜಿಗಳು ಅರ್ಹತೆ ಹೊಂದಿರುವ ಕಾರಣ ಅರ್ಹ ಮಾನದಂಡಗಳ ಪ್ರಕಾರ ವಸತಿ ರಹಿತ ಅಲೆಮಾರಿ ಮತ್ತು ಅರೆ ಅಲೆಮಾರಿ ವಸತಿ ಯೋಜನೆಯಡಿ ಮನೆಗಳನ್ನು ನೀಡುವ ಬಗ್ಗೆ ಸಮಿತಿಯು ತೀರ್ಮಾನಿಸಿತು. ಅಂತೆಯೇ ಮುಂದಿನ ಕ್ರಮಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅರ್ಜಿಗಳನ್ನು ರವಾನಿಸಲು ತೀರ್ಮಾನಿಸಿತು.
ಜಿಲ್ಲಾ ಪಂಚಾಯತ್ ಸಿಇಒ ಶೇಖ್ ತನ್ವೀರ್ ಆಸ್ಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ.ಸಿದ್ದಲಿಂಗೇಶ್ ಇತರರಿದ್ದರು.