ಆ.31ರಂದು ನಾರಾಯಣಗುರು ಹಾಗೂ ಸೆ.16ರಂದು ನುಲಿಯ ಚಂದಯ್ಯ ಜಯಂತಿ ಆಚರಣೆ: ಡಿಸಿ ಡಾ.ಕುಮಾರ ಮಾಹಿತಿ

1 (3)
Published on

ಮಂಡ್ಯ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.31ರಂದು ಬ್ರಹ್ಮಶ್ರೀ ನಾರಾಯಣಗುರು ಮತ್ತು ಸೆ.16ರಂದು ನುಲಿಯ ಚಂದಯ್ಯ ಜಯಂತಿಯನ್ನು ಆಯಾ ದಿನ ಬೆಳಗ್ಗೆ 11ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ವ್ಯವಸ್ಥಿತವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಅವರ ಸಾಮಾಜಿಕ ಕೆಲಸಗಳು ಸಮಾಜಕ್ಕೆ ಮಾದರಿಯಾಗಿವೆ. ಇವರ ತತ್ವ ಆದರ್ಶಗಳು ಇಂದಿನ ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮಕ್ಕೆ ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿ ಹಾಗೂ ಅಧಿಕಾರಿಗಳಿಗೆ ಆಹ್ವಾನ ನೀಡಬೇಕು. ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಅವರ ಬಗ್ಗೆ ಮಾತನಾಡುವ ಗಣ್ಯವ್ಯಕ್ತಿಯನ್ನು ಕರೆಯಿಸಿ. ಜತೆಗೆ ಇಬ್ಬರು ಮಹನೀಯರ ಚಿಂತನೆ ಹಾಗೂ ಹೋರಾಟಗಳ ಸಾಕ್ಷ್ಯ ಚಿತ್ರಗಳನ್ನು ತಯಾರಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉದಯ್‌ಕುಮಾರ್, ನಗರಸಭೆ ಸದಸ್ಯ ಅರುಣ್‌ಕುಮಾರ್, ಆರೋಗ್ಯ ಇಲಾಖೆಯ ಡಾ.ಅನಿಲ್ಕುಮಾರ್, ಮುಖಂಡರಾದ ಅಪ್ಪಾಜಿಗೌಡ, ಕೃಷ್ಣಕುಮಾರ್, ಕೆ.ವಿ.ನಾಗರಾಜು, ನಾಗರತ್ನ, ಕಿರಣ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net