ಜಯಂತ್ಯುತ್ಸವ ಸಮುದಾಯಕ್ಕೆ ಸೀಮಿತವಾಗದಿರಲಿ: ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿಕೆ

Dc Meeting mandya
Published on

ಮಂಡ್ಯ: ಮಹನೀಯರ ಜಯಂತ್ಯುತ್ಸವಗಳು ಒಂದು ಜಾತಿ, ಸಮುದಾಯ ಹಾಗೂ ವರ್ಗದವರಿಗೆ ಸೀಮಿತಗೊಳಿಸದೇ ಎಲ್ಲರೂ ಪಾಲ್ಗೊಂಡು ಸಹ ಮತದಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಫೆ.1ರಂದು ಮಡಿವಾಳ ಮಾಚಿದೇವ, 10ರಂದು ಕಾಯಕ ಶರಣರು, 15ರಂದು ಸಂತ ಸೇವಾಲಾಲ್, 16 ರಂದು ಸವಿತಾ ಮಹರ್ಷಿ, 19ರಂದು ಛತ್ರಪತಿ ಶಿವಾಜಿ, 20ರಂದು ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಮಾಡಲಾಗುವುದು. ಎಲ್ಲ ಕಾರ್ಯಕ್ರಮವೂ ನಗರದ ಗಾಂಧಿ ಭವನದಲ್ಲಿ ಆಚರಿಸಲಾಗುವುದು. ಹಾಗಾಗಿ ಎಲ್ಲ ಸಮುದಾಯದವರು ಭಾಗವಹಿಸಿ ಅರ್ಥಪೂರ್ಣವಾಗಿ ಆಚರಿಸಿ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮಾತನಾಡಿದರು. ಜಿಪಂ ಉಪ ಕಾರ್ಯದರ್ಶಿ ಆನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net