

ಮಂಡ್ಯ: ಕೌಶಲಾಭಿವದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿವಿಧ ಯೋಜನೆಯಡಿ ಜಿಲ್ಲೆಯ ಯುವ ಜನತೆಗೆ ಉದ್ಯೋಗಾಧಾರಿತ ಕೌಶಲಾಭಿವದ್ಧಿ ತರಬೇತಿ ನೀಡಲಾಗುವುದು. ಇದನ್ನು ಸರಿಯಾಗಿ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸಲಹೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಕೌಶಲ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ವಾತನಾಡಿದರು. ಸಿ.ಎಂ.ಕೆ.ಕೆ.ವೈ. ತರಬೇತಿ ಯೋಜನೆ, ಡೇ ನಲ್ಮ್, ಪಿ.ಎಂ.ಸ್ವನಿಧಿ ಒಳಗೊಂಡತೆ ಹಲವಾರು ಯೋಜನೆಗಳಡಿ ಆರ್ಥಿಕ ಸ್ವಾವಲಂಬಿಗಳಾಗುವಂತೆ ಉತ್ತೇಜಿಸುವ ಕಾರ್ಯಕ್ರಮಗಳಿವೆ. ಅವುಗಳ ಪ್ರಗತಿ ಪರಿಶೀಲನೆ ನಡೆಸಿ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ವಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಆಂಗ್ಲ ಭಾಷೆಯನ್ನು ಸುಲಲಿತವಾಗಿ ಓದುವ, ಬರೆಯುವ, ವಾತನಾಡುವ ಮತ್ತು ಗ್ರಹಿಸುವ ಸಾಮರ್ಥ್ಯವನ್ನು ವದ್ಧಿಸಲು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಲ್ಯಾಬ್ ಸಜ್ಜುಗೊಂಡಿದೆ. ಇದೇ ರೀತಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಪ್ರಾರಂಭಿಸಲು ಸಿದ್ಧತೆ ನಡೆಸಿ ಎಂದು ಸೂಚನೆ ನೀಡಿದರು.
ಜಿಲ್ಲಾ ಕೌಶಲ ಮಿಷನ್ ಯೋಜನೆಯಡಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ 8 ಉಪಸಮಿತಿಗಳಿದ್ದು, ಸಮಿತಿಗಳು ಪ್ರತಿ ತಿಂಗಳು ಸಭೆ ನಡೆಸಿ ಇಲಾಖೆಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಮಿಮ್ಸ್ ನಿರ್ದೇಶಕ ಡಾ.ಮಹೇಂದ್ರ, ಡಿಡಿಪಿಐ ಎಸ್.ಟಿ. ಜವರೇಗೌಡ, ನಗರಸಭೆ ಆಯುಕ್ತರಾದ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಿ.ಮಂಜುನಾಥ್, ಲೀಡ್ ಬ್ಯಾಂಕ್ ವ್ಯಾನೇಜರ್ ದೀಪಕ್, ಕೌಶಲಾಭಿವದ್ಧಿ ಅಧಿಕಾರಿ ವೇಣುಗೋಪಾಲ್, ಜಿಲ್ಲಾ ಸವಾಜ ಕಲ್ಯಾಣಾಧಿಕಾರಿ ಬಿ.ರಂಗೇಗೌಡ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶ್ರೀನಿವಾಸ್, ಕಾರ್ಮಿಕ ಇಲಾಖೆಯ ಅಧಿಕಾರಿ ಮಂಜುಳಾ, ವಿವೇಕ್, ಆರ್.ದಶರಥ, ಡಾ.ಕೆ.ಜಿ ಭವಾನಿ ಶಂಕರ್, ವಿ.ಎಸ್.ಅಶೋಕ್, ವಿವೇಕಾನಂದ ಇತರರಿದ್ದರು.