

ಮಂಡ್ಯ: ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ನಿವೇಶನರಹಿತ ಬಡ ಕುಟುಂಬದವರಿಗೆ ನಿವೇಶನ ಹಂಚುವ ಸಂಬಂಧವಿದ್ದ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ಆಯೋಜಿಸಲಾಗಿತ್ತು.
ಅಂತೆಯೇ ಮೊದಲ ಹಂತದಲ್ಲಿ ಆಯ್ಕೆಯಾಗಿರುವ 48 ಫಲಾನುಭವಿಗಳಿಗೆ ರಾಜೀವ ಗಾಂಧಿ ವಸತಿ ನಿಗಮದ ವತಿಯಿಂದ ಹಕ್ಕು ಪತ್ರ ನೀಡಲು ಶಿಫಾರಸು ಮಾಡಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ, ತಾಲೂಕು ಪಂಚಾಯಿತಿ ಇಒ ಎ.ಬಿ.ವೇಣು ಇತರರಿದ್ದರು.