

ಮಂಡ್ಯ: ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿರುವುದರಿಂದ ನದಿ ಕಲುಷಿತವಾಗುತ್ತಿದ್ದು, ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವೈಜ್ಞಾನಿಕವಾಗಿ ವಿಸರ್ಜನೆ ಮಾಡುವ ಕುರಿತು ಅಧಿಕಾರಿಗಳ ಸಮಿತಿ ರಚಿಸಿದ್ದು, ನೈಸರ್ಗಿಕವಾಗಿ ಅಸ್ತಿ ವಿಸರ್ಜನೆಗೆ ಬೇಕಿರುವ ಯಂತ್ರಗಳ ಕುರಿತಂತೆ ತಾಂತ್ರಿಕ ತಜ್ಞರಿಂದ ವರದಿ ಪಡೆದು ಡಿ.ಪಿ.ಆರ್ ಸಿದ್ಧಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣ, ಶ್ರೀರಂಗಪಟ್ಟಣ ಪುರಸಭೆ ಆಯುಕ್ತ ರಾಜಣ್ಣ ಇತರರಿದ್ದರು.