ಹೆದ್ದಾರಿಯಲ್ಲಿ ಡಿಸಿ ಸೂಚನೆ ಪಾಲನೆ ಕಾರ್ಯ ಆರಂಭ

dc
ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಲ್ಲಡ್ಕದಲ್ಲಿ ಕಾಲುದಾರಿ ನಿರ್ಮಾಣಗೊಳ್ಳುತ್ತಿದೆ.
Published on

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಕಳೆದ ಬುಧವಾರ ಕಲ್ಲಡ್ಕಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಅದರಿಂದಾಗುವ ಸಾರ್ವಜನಿಕ ತೊಂದರೆಗಳ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ಉಪಸ್ಥಿತರಿದ್ದ ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಸಹಿತ ನಾನಾ ಅಧಿಕಾರಿಗಳು, ಇಂಜಿನಿಯರುಗಳೊಂದಿಗೆ ಸಾರ್ವಜನಿಕರಿಗೆ ಅನುಕೂಲವಾಗುವ ಕೆಲವು ಮಾರ್ಪಾಡುಗಳನ್ನು ತಕ್ಷಣದಿಂದಲೇ ಆರಂಭಿಸುವಂತೆ ಸೂಚಿಸಿದ್ದರು. ಅದರಲ್ಲಿ ಪ್ರಮುಖವಾಗಿ ನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ, ಪಾದಚಾರಿಗಳು ದಾಟಲು ನಾಲ್ಕು ಕಡೆ ಕಾಲುದಾರಿ ನಿರ್ಮಾಣ, ತ್ಯಾಜ್ಯಗಳನ್ನು ತೆಗೆಯುವುದು ಹಾಗೂ ಹೆದ್ದಾರಿ ಸರ್ವೀಸ್ ರಸ್ತೆ ಸಮತಟ್ಟುಗೊಳಿಸಲು ನಿರಂತರವಾಗಿ ವೆಟ್ ಮಿಕ್ಸ್ ಹಾಕಲು ಸೂಚನೆ ನೀಡಿದ್ದರು. ಸದ್ಯ ಈ ಕಾಮಗಾರಿಗಳು ಆರಂಭಗೊಂಡಿವೆ. ಪಾದಚಾರಿಗಳು ದಾಟಲು ನಾಲ್ಕು ಕಡೆ ಜಾಗ ಗುರುತಿಸಿ ಕೆಲಸ ಆರಂಭಗೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net