ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಮಾತನಾಡಿ ಪ್ರತಿ ವರ್ಷವು ವಾಡಿಕೆಯಂತೆ ಮಳೆಗಾಲ ಪ್ರಾರಂಭವಾಗಿದ್ದು, ಸೊಳ್ಳೆಗಳು ಹೆಚ್ಚಿನ ಪ್ರಮಾಣದಲ್ಲಿ ಉತ್ಪತ್ತಿಗೊಳ್ಳುತ್ತವೆ, ಡೆಂಗೀ ನಿವಾರಣೆ ನಿಟ್ಟಿನಲ್ಲಿ ಸಮುದಾಯ ಪಾತ್ರವು ಮಹತ್ವದಾಗಿದ್ದಾಗಿದೆ ಎಂದು ತಿಳಿಸಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಶಿವಕುಮಾರ ಕೆ ಮಾನಕರ್ ಅವರು ಮಾತನಾಡಿ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಲಾರ್ವಾ ಸಮೀಕ್ಷೆ ಕೈಗೊಳ್ಳಲು ಬಂದಾಗ ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್ ನೀಲಗುಂದ ಸರ್ವರಿಗೂ ಸ್ವಾಗತಿಸಿ ಜಿಲ್ಲೆಯಲ್ಲಿ ಡೆಂಗೀ ನಿಯಂತ್ರಣ ಕೈಗೊಳ್ಳಲು ಗುಣಮಟ್ಟದ ಲಾರ್ವಾ ಸಮೀಕ್ಷೆ ಹಾಗೂ ಜ್ವರ ಸಮೀಕ್ಷೆ ಮಾಡಿ ಖಚಿತ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಸೂಕ್ತ ಆರೈಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ಎಂ.ಬಿ.ಸAಕದ, ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲ್ಲೂಕಾ ಆರೋಗ್ಯಾಧಿಕಾರಿಗಳು, ಸಹಾಯಕ ಕೀಟಶಾಸ್ತçಜ್ಞರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ರೋಪಸೇನ ಚವ್ಹಾಣ ವಂದಿಸಿದರು.