ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

28GDG07
Published on

- ಬೇಸಿಗೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರಲಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ಗದಗ : ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥಿತಪೂರೈಕೆ ಕುರಿತಂತೆ ಅಧಿಕಾರಿಗಳುಗಮನಹರಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದAತೆ ಕಾರ್ಯ ನಿರ್ವಹಿಸಬೇಕು. ತಾಲೂಕಾ ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಖಾಸಗಿ ಬೋರ್‌ವೆಲ್‌ಗಳ ಮುಖಾಂತರ ನೀರು ಪೂರೈಸಲು ತಯಾರಿ ಮಾಡಿಟ್ಟುಕೊಳ್ಳಬೇಕು. ಈಗಿರುವ ಬೋರ್‌ವೆಲ್ ಗಳನ್ನು ರಿಪೇರಿ ಮಾಡಿಸಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆಗೆ ಸಂಬAಧಿಸಿದAತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸಬೇಕು. ಮುಂಬರುವ ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಂಭವವಿರುವುದರಿAದ ಹೀಟ್‌ವೇವ್‌ನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಅರಿವು ಮೂಡಿಸಬೇಕು. ಹಿರಿಯ ನಾಗರಿಕರು, ಗರ್ಭಿಣಿಯರು, ಚಿಕ್ಕಮಕ್ಕಳಿಗೆ ಬಿಸಿಲಿನ ತಾಪಮಾನದಿಂದ ಆರೋಗ್ಯ ಸಮಸ್ಯೆ ಉಂಟಾಗದAತೆ ಮುಂಜಾಗ್ರತೆ ವಹಿಸುವಂತೆ ನೋಡಿಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ನಿರ್ದೇಶನ ನೀಡಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ ಶಿಂಗಟಾಲೂರು ಬ್ರಿಡ್‌ನಲ್ಲಿ ಸದ್ಯ 2.26 ಟಿ.ಎಂ.ಸಿ. ನೀರು ಸಂಗ್ರಹವಿದ್ದು ಇದರಲ್ಲಿ ಡೆಡ್ ಸ್ಟೋರೇಜ್ 1.42 ಟಿ.ಎಂ.ಸಿ. ನೀರು ಹೊರತುಪಡಿಸಿ ಬಳಕೆಗೆ 1.8 ಟಿ.ಎಂ.ಸಿ. ನೀರು ಲಭ್ಯವಿದೆ. ಈ 1.8 ಟಿ.ಎಂ.ಸಿ. ನೀರಿನಿಂದ ಜಿಲ್ಲೆಯ ಗದಗ ಬೆಟಗೇರಿ ಅವಳಿಸೇರಿದಂತೆ 4 ತಾಲೂಕಿನ ಗ್ರಾಮಗಳಿಗೆ ನೀರು ಪೂರೈಕೆ ಮಾಡಬಹುದಾಗಿದೆ. ಗದಗ ಬೆಟಗೇರಿ ಅವಳಿ ನಗರಕ್ಕೆ 0.2 ಟಿ.ಎಂ.ಸಿ. ನೀರನ್ನು ಜೂನ್ ಅಂತ್ಯದವರೆಗೆ ಅಗತ್ಯವಿದ್ದು ಸದ್ಯ ಸಿಂಗಟಾಲೂರು ಬ್ಯಾರೇಜ್‌ನಲ್ಲಿ ಅಗತ್ಯಕ್ಕೆ ತಕ್ಕಷ್ಟು ನೀರಿನ ಲಭ್ಯತೆ ಇದೆ ಎಂದು ತಿಳಿಸಿದರು.
ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ನಾಗರಾಜ್ ಎಚ್ ಮಾತನಾಡಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ದಾಸ್ತಾನು ಸಾಕಷ್ಟಿದೆ. ಯಾವುದೇ ಕೊರತೆಯಿರುವುದಿಲ್ಲ. ಜಾನುವಾರುಗಳಿಗೆ 41 ವಾರಗಳಿಗಾಗುವಷ್ಟು ಮೇವು ಲಭ್ಯವಿದೆ. ಮುಂಬರುವ ಬೇಸಿಗೆ ನಿಭಾವಣೆಗಾಗಿ ಪೂರ್ವಸಿದ್ಧತೆಗಾಗಿ 8 ಗೋಶಾಲೆಗಳನ್ನು ಗುರುತಿಸಿಟ್ಟುಕೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು ಮಾತನಾಡಿ ಮುಂಬರುವ ಬೇಸಿಗೆ ದಿನಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಂಭವವಿರುವುದರಿAದ ಹೀಟ್ ವೇವ್‌ನಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಐಇಸಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸAಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್., ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಅಬಕಾರಿ ಇಲಾಖೆ ಅಧಿಕಾರಿ ಲಕ್ಷಿö್ಮÃ ಸೇರಿದಂತೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net