ಡಿಸಿ ಕಚೇರಿಯಲ್ಲಿ ಸ್ಕ್ರೀನಿಂಗ್ ಸೆಂಟರ್

01
Published on

ಬೆಳಗಾವಿ: ವ್ಯಾಪಕವಾಗಿ ಹರಡುತ್ತಿರುವ ಕರೊನಾ ಭೀತಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೂ ತಟ್ಟಿದೆ. ಗುರುವಾರದಿಂದ ನಗರದ ಜಿಲ್ಲಾಧಿಕಾರಿ ಕಚೇರಿ, ನ್ಯಾಯಾಲಯ ಆವರಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಸೆಂಟರ್ ಆರಂಭಿಸಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ, ನ್ಯಾಯಾಲಯಕ್ಕೆ ಆಗಮಿಸುವ ನ್ಯಾಯಾಧೀಶರು, ಅಧಿಕಾರಿ, ಸಿಬ್ಬಂದಿ, ವಕೀಲರು, ಕಕ್ಷಿದಾರರು ಹಾಗೂ ಸಾರ್ವಜನಿಕರನ್ನು ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಅವರ ಆರೋಗ್ಯದ ಕುರಿತು ಮಾಹಿತಿ ಪಡೆಯಲಾಗುತ್ತಿದೆ.

ಹಿಂಬದಿ ದ್ವಾರ ಬಂದ್: ಜಿಲ್ಲಾಧಿಕಾರಿ ಕಚೇರಿಯ ಹಿಂಬದಿಯ ಪ್ರವೇಶ ದ್ವಾರಗಳನ್ನು ಬಂದ್ ಮಾಡಿ ಮುಂಭಾಗದಲ್ಲಿ ಮಾತ್ರ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಿಸಲಾಗಿರುವ ಸ್ಕ್ರೀನಿಂಗ್ ಸೆಂಟರ್‌ಗೆ ಗುರುವಾರ ಖುದ್ದಾಗಿ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಪ್ರತಿಯೊಬ್ಬರನ್ನು ತಪ್ಪದೇ ತಪಾಸಣೆ ಮಾಡುವಂತೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net