ಆಯುಧ ಠೇವಣಿ ಇಡಲು ಜಿಲ್ಲಾಧಿಕಾರಿ ಆದೇಶ

Dr. Bagadi Gowtham
????????????????????????????????????
Published on

ಚಿಕ್ಕಮಗಳೂರು: ಗ್ರಾಪಂ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಶಾಂತಿಯುತವಾಗಿ ಚುನಾವಣೆ ನಡೆಸುವ ಸಲುವಾಗಿ ಬಂದೂಕುಗಳನ್ನು ಹೊಂದುವುದು, ಶಸ್ತ್ರ ಹೊತ್ತು ತಿರುಗುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ಆಯುಧ ಪರವಾನಗಿದಾರರು ತಮ್ಮ ಆಯುಧಗಳನ್ನು ವ್ಯಾಪ್ತಿ ಪ್ರದೇಶದ ಠಾಣೆಯಲ್ಲಿ ಅಥವಾ ಅಧಿಕೃತ ಆಯುಧ ಮತ್ತು ಮದ್ದು ಗುಂಡುಗಳ ವಹಿವಾಟುದಾರರಲ್ಲಿ ಡಿ.31ರವರೆಗೆ ಠೇವಣಿ ಇಡುವಂತೆ ಆದೇಶಿಸಿದ್ದಾರೆ.

ಬ್ಯಾಂಕ್ ಗಳು, ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳಲ್ಲಿ ಭದ್ರತೆಗಾಗಿ ಆಯುಧಗಳನ್ನು ಹೊಂದಿರುವವರು ಹಾಗೂ ವೈಯಕ್ತಿಕವಾಗಿ ಜೀವ ಬೆದರಿಕೆ ಹೊಂದಿರುವವರು ಆಯುಧಗಳನ್ನು ತಮ್ಮಲ್ಲಿಯೇ ಇಟ್ಟುಕೊಳ್ಳುವ ಅನಿವಾರ್ಯತೆ ಸಕಾರಣಗಳೊಂದಿಗೆ ತಮ್ಮ ವ್ಯಾಪ್ತಿ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಪರಿಶೀಲಿಸಿ ಅರ್ಹತೆಗಳ ಆಧಾರದನ್ವಯ ಪೊಲೀಸ್ ಠಾಣೆಯ ಮುಖ್ಯಸ್ಥರ ಜವಾಬ್ದಾರಿ ಮೇಲೆ ಆಯುಧಗಳನ್ನು ಠೇವಣಿ ಇಡುವುದರಿಂದ ವಿನಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net