

ಮಂಗಳೂರು : ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ್ದಾರೆ.
ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಮಂಗಳೂರು ವತಿಯಿಂದ ನಗರದ ಐಎಂಎ ಭವನದಲ್ಲಿ ಶನಿವಾರ ನಡೆದ ವಿಶ್ವ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದರು.