ಶ್ವಾನ ಪ್ರದರ್ಶನಕ್ಕೆ ಡಿಸಿ ಶ್ಲಾನೆ

DC Shlane for dog show
ವಿಜಯಪುರದ ಪೊಲೀಸ್​ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನಕ್ಕೆ ಡಿಸಿ ಟಿ. ಭೂಬಾಲನ್​ ಚಾಲನೆ ನೀಡಿದರು. ಎಸ್​ಪಿ ಲಕ್ಷ$್ಮಣ ನಿಂಬರಗಿ, ಜಿಪಂ ಸಿಇಒ ರಿಷಿ ಆನಂದ, ಡಾ. ಅಶೋಕ ಗೊಣಸಗಿ ಮತ್ತಿತರರಿದ್ದಾರೆ.
Published on

ವಿಜಯಪುರ: ನಿಷ್ಠೆಗೆ ಮತ್ತೊಂದು ಹೆಸರೇ ಶ್ವಾನ. ಶ್ವಾನಗಳೆಂದರೆ ಎಲ್ಲರಿಗೂ ಬಲು ಪ್ರೀತಿ. ಅಂತಹ ಶ್ವಾನಗಳ ಪ್ರದರ್ಶನ ಪ್ರತಿವರ್ಷ ಹಮ್ಮಿಕೊಳ್ಳುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್​ ಹೇಳಿದರು.

ಜಿಲ್ಲಾ ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್​ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಪೊಲೀಸ್​ ಕವಾಯತು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದಲ್ಲಿ ಬಿಡಾಡಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರ ಹಾವಳಿ ನಿಯಂತ್ರಣಕ್ಕೆ ಪಾಲಿಕೆ ವತಿಯಿಂದ ಸಂತಾನಶಕ್ತಿ ಹರಣ ಚಿಕಿತ್ಸೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಪಂ ಸಿಇಒ ರಿಷಿ ಆನಂದ ವಿವಿಧ ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದನ್ನು ಪ್ರಶಂಸಿಸಿ ಮಾತನಾಡಿ, ಶ್ವಾನ ಪ್ರದರ್ಶನವನ್ನು ಜಿಲ್ಲಾ ಪಶು ಮತ್ತು ಪಶುಪಾಲನಾ ಇಲಾಖೆ ಪ್ರತಿ ವರ್ಷ ಹಮ್ಮಿಕೊಳ್ಳುತ್ತಿರುವುದು ಶ್ಲಾನೀಯ ಎಂದರು.

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರಿಂಗ್​ ಉದ್ಘಾಟಿಸಿ, ವರ್ಷದಿಂದ ವರ್ಷಕ್ಕೆ ಪ್ರದರ್ಶನದಲ್ಲಿ ಶ್ವಾನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಪ್ರದರ್ಶನ ಸಾರ್ಥಕವಾಗುತ್ತಿದೆ ಎಂದು ಹೇಳಿದರು.

262 ಶ್ವಾನಗಳು ಭಾಗಿ : ಶ್ವಾನ ಪ್ರದರ್ಶನದಲ್ಲಿ ನೆರೆೆಯ ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ವಿವಿಧ 21 ತಳಿಯ 262 ಶ್ವಾನಗಳು ಭಾಗವಹಿಸಿ ಶ್ವಾನಪ್ರಿಯರ ಗಮನಸೆಳೆದವು.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ$್ಮಣ ನಿಂಬರಗಿ, ಜಿಲ್ಲಾ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ ಗೊಣಸಗಿ, ಮುಖ್ಯಪಶು ವೈದ್ಯಾಧಿಕಾರಿ (ಆಡಳಿತ) ಡಾ. ಬಸವರಾಜ ಕನಮಡಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net