ಗಡಿಭಾಗದ ಚೆಕ್‌ಪೋಸ್ಟ್‌ಗೆ ಡಿಸಿ, ಎಸ್ಪಿ ಭೇಟಿ

25-03-Shiva-5
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಶಕ್ತಿನಗರದಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗೆ ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಹಾಗೂ ಎಸ್ಪಿ ಬಿ.ನಿಖಿಲ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Published on

ರಾಯಚೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಹಾಗೂ ಎಸ್ಪಿ ಬಿ.ನಿಖಿಲ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಹೊರವಲಯದ ಬೈಪಾಸ್ ರಸ್ತೆ, ತಾಲೂಕಿನ ಶಕ್ತಿನಗರ, ಚಂದ್ರಬಂಡಾ, ಸಿಂಗನೋಡಿ, ಯರಗೇರಾ, ಕೊತ್ತದೊಡ್ಡಿ, ಗಿಲ್ಲೆಸುಗೂರು, ಯರಗೇರಾ ಗ್ರಾಮಗಳಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಕಾರ್ಯ ಪರಿಶೀಲಿಸಿದರು.
ಪಕ್ಕದ ಆಂಧ್ರ ಮತ್ತು ತೆಲಂಗಾಣದಿಂದ ಜಿಲ್ಲೆಗೆ ಬರುವ ಎಲ್ಲ ವಾಹನಗಳನ್ನು ತಪಾಸಣೆ ನಡೆಸಬೇಕು. ಹಣ, ಮದ್ಯ ಸಾಗಣೆ ಕಂಡು ಬಂದಲ್ಲಿ ವಶಕ್ಕೆ ಪಡೆಯಬೇಕು. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದಲ್ಲಿ ಮೇಲಾಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಿಪಿಐ ನಿಂಗಪ್ಪ ಸೇರಿದಂತೆ ಕಂದಾಯ ಸೇರಿದಂತೆ ಇನ್ನಿತರ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net