ತಾಳಿಕೋಟೆ ತಾಲೂಕಿನ ಸರ್ಕಾರಿ ಕಚೇರಿಗಳಿಗೆ ಡಿಸಿ ಟಿ.ಭೂಬಾಲನ್ ಭೇಟಿ; ಪರಿಶೀಲನೆ

DC TALIKOTE VISIT
ತಾಳಿಕೋಟೆ ತಹಸೀಲ್ದಾರ್ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
Published on

ವಿಜಯಪುರ: ತಾಳಿಕೋಟೆ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಳಿಕೋಟೆ ತಹಸೀಲ್ದಾರ್ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾರ್ಯಗಳಿಗಾಗಿ ಬರುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ನಿಗದಿತ ಕಾಲಾವಧಿಯೊಳಗೆ ಸಾರ್ವಜನಿಕರು ಕೋರುವ ಅಗತ್ಯ ಪ್ರಮಾಣ ಪತ್ರ ವಿತರಣೆಗೆ ಕ್ರಮವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಸೂಚನೆ ನೀಡಿದರು.

ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿಗಳು, ಕಾಗರನೂರ ಗ್ರಾಮದ ಸ್ಮಶಾನ ಸ್ವಚ್ಛತೆಗೆ ಸಂಬಂಧಿಸಿದ ಮನವಿಯನ್ನು ಸ್ವೀಕರಿಸಿ, ಸ್ವಚ್ಛತೆ ಕುರಿತು ಕ್ರಮ ವಹಿಸುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಹಳೇ ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ, ನ್ಯಾಯಾಂಗ ಇಲಾಖೆ ಹಾಗೂ ತಾಲೂಕಾ ಕಚೇರಿ ಕಟ್ಟಡಗಳನ್ನು ಪರಿಶೀಲಿಸಿದರು. ಉದ್ದೇಶಿತ ತಾಲೂಕು ಆಡಳಿತ ಕಟ್ಟಡದ ಜಮೀನು ಹಾಗೂ ಹಡಗಿನಾಳ ರಸ್ತೆಯನ್ನು ಪರಿಶೀಲಿಸಿದರು.

ನಂತರ ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ, ಕಚೇರಿ ಹಾಗೂ ಅಧಿಕಾರಿ-ಸಿಬ್ಬಂದಿ ಕಾರ್ಯನಿರ್ವಹಣೆ ಕುರಿತು ಪರಿಶೀಲಿಸಿದ ಅವರು, ಸಾರ್ವಜನಿಕರಿಂದ ಯಾವುದೇ ದೂರು ಬಾರದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ತಾಳಿಕೋಟೆ ತಹಸೀಲ್ದಾರ್ ಕೀರ್ತಿ ಚಾಲಕ್, ತಾಪಂ ಇಒ ಬಿ.ಆರ್.ಬಿರಾದಾರ, ಪುರಸಭೆ ಮುಖ್ಯಾಧಿಕಾರಿ ಉದಯಕುಮಾರ ಘಟಕಾಂಬಳೆ, ಶಿಕ್ಷಣ ಸಂಯೋಜನಾಧಿಕಾರಿ ಸುರೇಶ ಹಿರೇಮಠ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net