ರಾಜಕಾಲುವೆ ಒತ್ತುವರಿ ತೆರವಿಗೆ ಡಿಸಿ ಟಿ.ಭೂಬಾಲನ್ ಸೂಚನೆ

RAJAKALUVE
ವಿಜಯಪುರ ನರದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ರಾಜಕಾಲುವೆ ಪರಿಶೀಲಿಸಿದರು. ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮತ್ತಿತರರಿದ್ದಾರೆ.
Published on

ವಿಜಯಪುರ: ನಗರದ ಬಬಲೇಶ್ವರ ನಾಕಾ ಹತ್ತಿರವಿರುವ ಮುಜಾವರ ಗಲ್ಲಿ, ಬಾಗವಾನ ಕಾಲನಿ ಸೇರಿದಂತೆ ವಿವಿಧೆಡೆ ಒತ್ತುವರಿಯಾಗಿರುವ ರಾಜಕಾಲುವೆ ತೆರವಿಗೆ ಪ್ರಾಚ್ಯವಸ್ತು ಇಲಾಖೆ, ಭೂಮಾಪನ ಹಾಗೂ ಮಹಾನಗರ ಪಾಲಿಕೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.

ಮಂಗಳವಾರ ನಗರದ ರಹೀಮನಗರಕ್ಕೆ ಭೇಟಿ ನೀಡಿ ಪರಿಶೀಲಿಸಿದರ ಅವರು, ರಾಜಕಾಲುವೆ ಒತ್ತುವರಿಯಿಂದ ಮಳೆಯ ನೀರು ಸರಾಗವಾಗಿ ಹರಿಯದೇ ರಸ್ತೆ, ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಒತ್ತುವರಿ ತೆರವಿಗೆ ಮುಂದಾಗಬೇಕು. ಇಬ್ರಾಹಿಂರೋಜಾದಿಂದ ಬಬಲೇಶ್ವರ ನಾಕದವರೆಗೆ ರಾಜಕಾಲುವೆಯ ಅಕ್ಕಪಕ್ಕ ಅತಿಕ್ರಮಣ ಮಾಡಿದವರನ್ನು ತೆರವುಗೊಳಿಸಬೇಕು. ಅತಿಕ್ರಮಣ ಮಾಡಿದವರಿಗೆ ಬೇರೆ ಕಡೆ ಸ್ಥಳಾಂತರ ಮಾಡಿಸುವಲ್ಲಿ ಅಧಿಕಾರಿಗಳು ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net