ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ, ಜಿಲ್ಲಾಧಿಕಾರಿ ಮಧ್ಯಸ್ಥಿಕೆಗೆ ಆಗ್ರಹ

0101
Published on

ಬೆಳಗಾವಿ: ತಾಲೂಕಿನ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗೆಹರಿಸಲು ಜಿಲ್ಲಾಧಿಕಾರಿ ಮಧ್ಯಸ್ಥಿಕೆ ವಹಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಹಾಗೂ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಮೊಟ್ಟ ಮೊದಲಬಾರಿಗೆ ಬ್ರಿಟಿಷರ ವಿರುದ್ಧ ಹೋರಾಡಿದ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪೀರನವಾಡಿಯ ಮುಖ್ಯ ವೃತ್ತದಲ್ಲಿ ಪ್ರತಿಷ್ಠಾಪನೆ ಮಾಡುವಂತೆ ಅಭಿಮಾನಿಗಳು ಹಲವು ವರ್ಷಗಳಿಂದ ಹೋರಾಡುತ್ತಿದ್ದಾರೆ. ಆದರೆ, ಈ ವಿಚಾರ ಇದೀಗ ವಿವಾದವಾಗಿ ಪರಿಣಮಿಸಿದೆ. ಹೀಗಾಗಿ ಗ್ರಾಮದ ಮುಖ್ಯ ವೃತ್ತದಲ್ಲೇ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿಸಲು ತಾವು ಕೂಡಲೇ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು.

ಈ ವಿಷಯದಲ್ಲಿ ನಿರ್ಲಕ್ಷೃ ವಹಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದರು. ಮಹಾದೇವ ತಳವಾರ, ಸುರೇಶ ಗವಣ್ಣವರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net