ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ, ಪರಿಶೀಲನೆ

ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ, ಪರಿಶೀಲನೆ
Published on

ಕುಶಾಲನಗರ: ಕುಶಾಲನಗರ ಮೈಸೂರು ಗಡಿಭಾಗದ ಕೊಪ್ಪ ವಾಹನ ತಪಾಸಣಾ ಕೇಂದ್ರಕ್ಕೆ ಗುರುವಾರ ಕೊಡಗು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಮತ್ತು ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ನೇತೃತ್ವದಲ್ಲಿ ಸಿಬ್ಬಂದಿ ವಾಹನ ತಪಾಸಣೆ ನಡೆಸಿದರು.

ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮಾತನಾಡಿ, ಕೊಡಗು ಜಿಲ್ಲೆಯ ಎಲ್ಲ ಗಡಿ ತಪಾಸಣಾ ಕೇಂದ್ರಗಳಲ್ಲಿ ಇದುವರೆಗೆ 14 ಲಕ್ಷ ರೂ. ನಷ್ಟು ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತಿ ದಿನ ವಿವಿಧ ಇಲಾಖೆಯ ಸಿಬ್ಬಂದಿ 3 ಶಿಫ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. ತಪಾಸಣೆ ಮಾಡುವ ಸಂದರ್ಭದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಾಗುತ್ತವೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು. ಪೊಲೀಸ್, ಕಂದಾಯ, ವಿವಿಧ ಇಲಾಖೆಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net