ನೆರೆ ನೀರು ನುಗ್ಗಿದ ಪ್ರದೇಶ ಡಿಸಿ ಭೇಟಿ

dc
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಸಂಕಷ್ಟ ಆಲಿಸಿದರು.
Published on

ಕುಂದಾಪುರ: ಪುರಸಭೆಯ ಒಂಬತ್ತುದಂಡಿಗೆ, ಖಾರ್ವಿಕೇರಿ ಮೊದಲಾದೆಡೆ ಬುಧವಾರ ರಾತ್ರಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ ಪ್ರದೇಶಗಳಿಗೆ ಗುರುವಾರ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಸಂಕಷ್ಟ ಆಲಿಸಿದರು.

ಖಾರ್ವಿಕೇರಿ ಪ್ರದೇಶಕ್ಕೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ, ಅನಿರೀಕ್ಷಿತ ಮಳೆಯಾಗುತ್ತಿದ್ದು ಸಾರ್ವಜನಿಕರು ಎಚ್ಚರದಿಂದ ಇರಬೇಕು. ತುರ್ತು ಅವಶ್ಯಗಳಿಗೆ ತಾಲೂಕು ಆಡಳಿತದ ತುರ್ತು ಸಂಪರ್ಕ ಸಂಖ್ಯೆಯನ್ನು ಸಂಪರ್ಕಿಸಬೇಕು. ಭಯಭೀತರಾಗುವ ಅಗತ್ಯ ಇಲ್ಲ ಎಂದು ಭರವಸೆ ನೀಡಿದರು.

ಸಹಾಯಕ ಕಮಿಷನರ್ ಮಹೇಶ್‌ಚಂದ್ರ, ತಹಸೀಲ್ದಾರ್ ಶೋಭಾಲಕ್ಷ್ಮೀ, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ಆರ್., ಆರೋಗ್ಯ ನಿರೀಕ್ಷಕ ರಾಘವೇಂದ್ರ ನಾಯ್ಕ್, ಇಂಜಿನಿಯರ್ ಗುರುಪ್ರಸಾದ ಶೆಟ್ಟಿ, ಅರುಣ್ ಬರೆಟ್ಟೊ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net