ಮಿಮ್ಸ್‌ನಲ್ಲಿ ಸಾರ್ವಜನಿಕರಿಗೆ ಮೂಲ ಸೌಕರ್ಯ ಕಲ್ಪಿಸಿ: ಸೂಚನೆ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ

DC visit to Mims Mandya
Published on

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಿಎಸ್‌ಆರ್ ಅನುದಾನದಡಿ ಮೂಲ ಸೌಕರ್ಯ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಮಿಮ್ಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಮಾತನಾಡಿದ ಅವರು, ರೋಗಿಗಳನ್ನು ನೋಡಿಕೊಳ್ಳಲು ಬರುವ ಸಂಬಂಧಿಕರು ಆಸ್ಪತ್ರೆ ಆವರಣ ಹಾಗೂ ರಸ್ತೆ ಬದಿ ಕುಳಿತುಕೊಳ್ಳುತ್ತಾರೆ. ಅವರಿಗೆ ಡಾರ್ಮೆಟರಿ ಹಾಗೂ ಶೌಚಗೃಹದ ಅಗತ್ಯತೆ ಇದೆ ಎಂದರು.

ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಪಿ.ವಿ.ಶ್ರೀಧರ್ ಮಾತನಾಡಿ, ಹೊರರೋಗಿ ವಿಭಾಗದಲ್ಲಿ 5 ಸಾವಿರಕ್ಕೂ ಹೆಚ್ಚಿನ ರೋಗಿಗಳು ಚಿಕಿತ್ಸೆಗೆ ಬರುತ್ತಾರೆ. ಇದಲ್ಲದೇ ಅಂದಾಜು 150 ಜನರು ಆಸ್ಪತ್ರೆಗೆ ದಾಖಲಾಗುತ್ತಾರೆ. ಆಸ್ಪತ್ರೆಯಲ್ಲಿ ಶೌಚಗೃಹದ ಕೊರತೆ ಇದೆ. 30 ಲಕ್ಷ ರೂ ಅನುದಾನದಲ್ಲಿ ಡಾರ್ಮೆಟರಿ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, 15 ದಿನದಲ್ಲಿ ಕಟ್ಟಡ ನಿರ್ಮಾಣದ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಮಿಮ್ಸ್ ನಿರ್ದೇಶಕ ಡಾ.ಬಿ.ಜೆ.ಮಹೇಂದ್ರ, ಆಹಾರ ಇಲಾಖೆ ಜೆಡಿ ಕೃಷ್ಣಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net