ನವೋದಯ ಶಾಲೆಗೆ ಡಿಸಿ ಭೇಟಿ

HYR JNV 01
Published on

ಹಿರಿಯೂರು: ತಾಲೂಕಿನ ಉಡುವಳ್ಳಿ ಜವಾಹರ್ ನವೋದಯ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ 8 ವಿದ್ಯಾರ್ಥಿಗಳು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಶನಿವಾರ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.

ವಸತಿ ಶಾಲೆಯ ಕೇವಲ 8 ವಿದ್ಯಾರ್ಥಿಗಳು ಮಾತ್ರ ಅಸ್ವಸ್ಥರಾಗಿರುವುದು ಅನುಮಾನಾಸ್ಪದವಾಗಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಪಾಲಕರು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹಿನ್ನೆಲೆಯಲ್ಲಿ ಡಿಸಿ ಭೇಟಿ ಮಾಹಿತಿ ತಿಳಿದಿದ್ದ ನೂರಾರು ಪಾಲಕರು, ಶಾಲೆ ಬಳಿ ಜಮಾಯಿಸಿದ್ದರು.

ವಸತಿ ಶಾಲೆಯಲ್ಲಿನ ಶಿಕ್ಷಕರ ನಡುವಿನ ಶೀತಲ ಸಮರ ಘಟನೆಗೆ ಕಾರಣ, ಕಂಪ್ಯೂಟರ್ ಶಿಕ್ಷಕಿ ರಾತ್ರೋರಾತ್ರಿ ಬೆಂಗಳೂರಿಗೆ ಹೋಗಲು ಸಹಕರಿಸಿದ ಉಪ ಪ್ರಾಂಶುಪಾಲೆ ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಪಾಲಕರು ಡಿಸಿಗೆ ಮನವಿ ಸಲ್ಲಿಸಿದರು.

ಪ್ರಕರಣ ನಡೆಯುತ್ತಿದ್ದಂತೆ ಸ್ಥಳಕ್ಕೆ ಎಸಿ ಕಾರ್ತಿಕ್, ತಹಸೀಲ್ದಾರ್ ರಾಜೇಶ್‌ಕುಮಾರ್ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net