

ಮಂಡ್ಯ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ಶ್ರೀರಂಗಪಟ್ಟಣ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕು ಕಚೇರಿಯನ್ನು ಕಡತ ವೀಕ್ಷಿಸಿದ ಅವರು, ಸಾರ್ವಜನಿಕರನ್ನು ಅಲೆದಾಡಿಸದೆ ನಿಗದಿತ ಸಮಯಕ್ಕೆ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ನಂತರ ಮತದಾರ ಪಟ್ಟಿ ಪರಿಷ್ಕರಣೆ 2024ರ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.