ಸರ್ಕಾರಿ ಮಹಿಳಾ ಕಾಲೇಜಿನ ಸೋರುವ ಕಟ್ಟಡಕ್ಕೆ ಜಿಲ್ಲಾಧಿಕಾರಿ ಭೇಟಿ

19 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣ ಆವರಣದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸೋರುವ ಕಟ್ಟಡಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಎಲ್ಲ ವರ್ಗಕೋಣೆ, ಕಟ್ಟಡದ ಆವರಣಕ್ಕೆ ಭೇಟಿ ನೀಡಿದರು. ಅಲ್ಲಿದ್ದ ವಿದ್ಯಾರ್ಥಿನಿಯರಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟ್ಟಡ ದುರಸ್ತಿಗಿಂತ ಬೇರೆ ಕಟ್ಟಡದಲ್ಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅವಕಾಶ ನೀಡುವುದು ಸೂಕ್ತ. ನೂತನ ಕಟ್ಟಡ ನಿಮÁðಣಕ್ಕೆ ಈಗಿನ ಕಟ್ಟಡದ ಹತ್ತಿರ 1 ಎಕರೆ ಜಮೀನು ಹಾಗೂ 3.5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಶೀಘ್ರ ಟೆಂಡರ್ ಮಾಡಿ ಕಾಮಗಾರಿ ಆರಂಭಿಸಲು ಸೂಚಿಸಲಾಗಿದೆ ಎಂದರು.
ಕಾಲೇಜು ಪ್ರಾಚಾರ್ಯ ಡಾ. ಎಸ್.ಎಸ್. ಅಂಗಡಿ, ಪ್ರಾಧ್ಯಾಪಕರು, ನಿರ್ಮಿತಿ ಕೇಂದ್ರದ ಇಂಜಿನಿಯರ್ ಸುರೇಂದ್ರಕುಮÁರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net