

ಬೆಳಗಾವಿ: ಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಅವರ ಪತ್ನಿ ನೇಣು ಬಿಗಿದುಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶ್ರುತಿ ಕಪ್ಪಲಗುದ್ದಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ತಾಲೂಕಿನ ಮಾರಿಹಾಳ ಗ್ರಾಮದ ನಿವಾಸಿಯಾದ ಶ್ರುತಿ, ಎರಡು ವರ್ಷದ ಹಿಂದೆ ಗೋಕಾಕ ತಾಲೂಕಿನ ಕಲ್ಲೋಳಿ ಪಟ್ಟಣದ ನೀಲಕಂಠ ಕಪ್ಪಲಗುದ್ದಿ ಅವರೊಂದಿಗೆ ವಿವಾಹವಾಗಿದ್ದರು. ನಿತ್ಯವೂ ಪತಿ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ಶ್ರುತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶ್ರುತಿಗೆ 15 ತಿಂಗಳ ಮಗಳಿದ್ದಾಳೆ. ಆತ್ಮಹತ್ಯೆಗೂ ಮುನ್ನ ‘ಪ್ಲೀಸ್ ಟೇಕ್ ಕೇರ್ ಮೈ ಡಾಟರ್’ ಎಂದು ತಂದೆಗೆ ವಾಟ್ಸಪ್ ಮೂಲಕ ಸಂದೇಶ ರವಾನಿಸಿದ್ದಾಳೆ. ಫಟಪ್ರಭಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.