

ಬೆಳಗಾವಿ: ಇಲ್ಲಿನ ಚನ್ನಮ್ಮ ವೃತ್ತದ ಬಳಿ ಯುವಕರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮೂವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ನಡೆಯುತ್ತಿರುವ ಸಂದರ್ಭದಲ್ಲಿ ಪ್ರವೀಣ, ದರ್ಶನ ಹಾಗೂ ಸತೀಶ ಎಂಬುವರ ಹಲ್ಲೆ ಒಳಗಾದವರು. ಇವರು ಜಿಲ್ಲಾಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಪಿಎಂಸಿ ಠಾಣೆ ಪೊಲೀಸರು ತಿಳಿಸಿದ್ದಾರೆ.