ನೀವು ಬೆಂಗಳೂರು ಜಿಲ್ಲೆಯ ಮಕ್ಕಳು

KKK
Published on

ಕನಕಪುರ  : ತಂತ್ರಜ್ಞಾನ ಯುಗದಲ್ಲಿರುವ ಇಂದಿನ ಮಕ್ಕಳು ಬೆರಳ ತುದಿಯಲ್ಲಿ ಲಭ್ಯವಿರುವ ಮಾಹಿತಿ ಪಡೆದುಕೊಂಡು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುವಾರ್ ವಿದ್ಯಾರ್ಥಿಗಳಿಗೆ ಕಿವಿವಾತು ಹೇಳಿದರು.

ಕನಕಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ನೂತನ ಕಟ್ಟಡ ಉದ್ಘಾಟಿಸಿ ವಾತನಾಡಿ, ಇಲ್ಲಿ 15-20 ವರ್ಷದ ಮಕ್ಕಳಿದ್ದೀರಿ. ನೀವು ವಿದ್ಯಾವಂತರು, ಪ್ರಜ್ಞಾವಂತರು. ನೀವು ಕೇವಲ ಕನಕಪುರದ ವಿದ್ಯಾರ್ಥಿಗಳಲ್ಲ. ನೀವು ಬೆಂಗಳೂರು ಜಿಲ್ಲೆಯ ಮಕ್ಕಳು. ಇದು ಬೆಂಗಳೂರು ಜಿಲ್ಲೆ. ಕಾರಣಾಂತರದಿಂದ ಬೇರೆ ಹೆಸರು ಬಂದಿದೆ. ನೀವು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರೂ ಜಾಗತಿಕಮಟ್ಟದ ಮಕ್ಕಳ ಜತೆ ಸ್ಪರ್ಧಿಸಲು ಪರಿಶ್ರಮ ಹಾಕಬೇಕು. ಕನಕಪುರ ಯಾವ ಮಟ್ಟಕ್ಕೆ ಬೆಳೆಯುತ್ತದೆ ಎಂದು ನಾನು ಈಗ ಹೇಳುವುದಿಲ್ಲ. ಹೇಳಿದರೆ ಅದನ್ನು ಬೇರೆ ರೀತಿ ಬಿಂಬಿಸಲಾಗುತ್ತದೆ ಎಂದು ತಿಳಿಸಿದರು.

ನಿಮ್ಮ ಮೂಲ ಮರೆಯಬೇಡಿ
ನೀವು ಯಾವುದೇ ಕ್ಷೇತ್ರ ಆಯ್ಕೆವಾಡಿಕೊಂಡರೂ ನಿಮ್ಮ ಗುರಿ ಆ ಕ್ಷೇತ್ರದಲ್ಲಿ ನಾಯಕತ್ವ ವಹಿಸುವಂತೆ ಇರಬೇಕು. ನಿಮ್ಮ ಶಿಕ್ಷಕರು, ಪಾಲಕರು ನಿಮ್ಮ ಮೇಲೆ ಇಟ್ಟಿರುವ ವಿಶ್ವಾಸ ಗಮನದಲ್ಲಿಟ್ಟುಕೊಂಡು ಪ್ರಯತ್ನ ವಾಡಬೇಕು. ಯಾವ ಸಾಧನೆಯೂ ಅಸಾಧ್ಯವಲ್ಲ. ಬಾಗಲಕೋಟೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ 10ನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದರು. ಕೇವಲ ಕೆಲಸಕ್ಕೆ ಸೇರಬೇಕೆಂದು ಗುರಿ ಇಟ್ಟುಕೊಳ್ಳಬೇಡಿ. ನೀವು ಬೇರೆಯವರಿಗೆ ಕೆಲಸ ಕೊಡುವಂತೆ ಆಗಬೇಕು ಎಂದು ಡಿಸಿಎಂ ತಿಳಿಸಿದರು.

ನೀವು ನಿಮ್ಮ ಮೂಲ ಮರೆಯಬೇಡಿ. ಶಿಕ್ಷಕರು, ಪಾಲಕರೇ ನಿಮ್ಮ ಮೂಲ. ಎಷ್ಟೇ ಕಷ್ಟವಿದ್ದರೂ ಅವರು ನಿಮಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ನೀವು ಕನಸು ಕಾಣಬೇಕು. ಕನಸು ನನಸಾಗಿಸಲು ಹಂಬಲ ಹೊಂದಿರಬೇಕು, ಅದಕ್ಕಾಗಿ ಪರಿಶ್ರಮ ಹಾಗೂ ಬದ್ಧತೆ ಹೊಂದಿರಬೇಕು ಎಂದು ತಿಳಿಸಿದರು.

’ಕನಕಪುರ ಅಂದು-ಇಂದು’ ಚಿತ್ರ ತಯಾರು
ನಾನು ಇಲ್ಲಿನ ಶಾಸಕನಾದಾಗ ಕನಕಪುರದ ರಸ್ತೆಗಳು ಹೇಗಿದ್ದವು. ಈಗ ಹೇಗೆ ಆಗಿವೆ ಎಂಬುದರ ಬಗ್ಗೆ ಒಂದು ಚಿತ್ರ ರಚಿಸಲಾಗಿದೆ. ಕನಕಪುರ ತಾಲೂರು ಕರಿಯಪ್ಪನವರ ಕಾಲದಿಂದಲೂ ವಿದ್ಯಾ ಕ್ಷೇತ್ರದಲ್ಲಿ ಹೆಸರುವಾಸಿ. ಹಾಸನ, ಮೈಸೂರು, ಬೆಂಗಳೂರಿನಿಂದ ಮಕ್ಕಳು ಬಂದು ಓದುತ್ತಿದ್ದರು. ಕನಕಪುರ ಬೆಂಗಳೂರು ರಸ್ತೆ ಎಜುಕೇಷನ್ ಕಾರಿಡಾರ್ ಆಗುತ್ತಿದೆ. ದಯಾನಂದ ಸಾಗರ್, ಜೈನ್ ಕಾಲೇಜು ಸೇರಿ ವಿವಿಧ ಸಂಸ್ಥೆಗಳು ಇಲ್ಲಿವೆ. ಸುರೇಶ್ ಅವರು ಸಾಕಷ್ಟು ಪರಿಶ್ರಮ ಪಟ್ಟು ಈ ಭಾಗದ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ನಮ್ಮ ಸಂಸ್ಥೆಯಿಂದ ಪ್ರತಿ ವರ್ಷ 300 ವಿದ್ಯಾರ್ಥಿಗಳಂತೆ ಈಗ 4 ಸಾವಿರ ರೂ. ನೆರವು ನೀಡಲಾಗುತ್ತದೆ. ಜತೆಗೆ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ಪ್ರತಿ ವರ್ಷ ಕನಕೋತ್ಸವ ವಾಡಿ ಅನೇಕ ಕಾರ್ಯಕ್ರಮ ವಾಡಲಾಗುತ್ತಿದೆ ಎಂದು ಶಿವಕುಮಾರ್ ತಿಳಿಸಿದರು.

ನಿಮ್ಮ ಪಾಲಕರು ನನಗೆ ಆಶೀರ್ವಾದ ವಾಡಿದ್ದು, ನಾನು ರಾಜ್ಯಕ್ಕೆ ಸೇವೆ ವಾಡಲು ಪ್ರಯತ್ನಿಸುತ್ತಿದ್ದೇನೆ. ನಾನು ಇಲ್ಲಿ ಡಿಸಿಎಂ ಆಗಿ ಬಂದಿಲ್ಲ. ನನ್ನ ಡಿಸಿಎಂ ಹುದ್ದೆ ವಿಧಾನಸೌಧದಲ್ಲಿ ವಾತ್ರ. ನಾನು ಇಲ್ಲಿನ ಪ್ರತಿನಿಧಿ. ನೀವು ನಮ್ಮ ಮನೆ ಮಕ್ಕಳು ಎಂದು ತಿಳಿಸಿದರು.

ಎಂಎಲ್‌ಸಿ ಎಸ್.ರವಿ, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಎಎಸ್‌ಪಿ ರಾಮಚಂದ್ರಯ್ಯ, ಪ್ರಾಂಶುಪಾಲೆ ಡಾ.ಶ್ಯಾಮಲ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net