ಟೀಕೆಗಳು ಸಾಯುತ್ತವೆ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

dks
Published on

ಹಲಗೂರು(ಮಂಡ್ಯ ಜಿಲ್ಲೆ): ಮಳೆ ಬರಬೇಕು ಬರಲಿ, ಬೆಂಗಳೂರಿನಲ್ಲಿ ಯಾವ ಅವಾಂತರವೂ ಇಲ್ಲ. ಎಷ್ಟೇ ಮಳೆ ಬಂದರೂ ಅರ್ಧ ಗಂಟೆಯಲ್ಲಿ ಸರಿ ಮಾಡುವ ಕೆಲಸ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸಮೀಪದ ಟಿ.ಕೆ.ಹಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟೇ ಮಳೆ ಬಂದರೂ ತಡೆದುಕೊಳ್ಳುವ ಶಕ್ತಿ ನಮಗಿದೆ. ಈ ಬಗ್ಗೆ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ. ಈಗಾಗಲೇ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದೇನೆ. ಬೆಂಗಳೂರಿಗೆ ಹೋದ ತಕ್ಷಣ ಮತ್ತೆ ಸಭೆ ಮಾಡುತ್ತೇನೆ ಎಂದರು.

ಯಾರೂ ಗಾಬರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಮುಂಜಾಗ್ರತಾವಾಗಿ ರಜೆ ಘೋಷಣೆ ಮಾಡಿದ್ದೇವೆ. ಇನ್ನು ವಿರೋಧ ಪಕ್ಷದ ಟೀಕೆ ಟಿಪ್ಪಣಿಗಳು ಇದ್ದೇ ಇರುತ್ತವೆ. ಆದರೆ ಟೀಕೆಗಳು ಸತ್ತು ಹೋಗುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ. ಟೀಕೆಗಳು ಈಗಾಗಲೇ ಸತ್ತು ಹೋಗಿವೆ. ಈಗ ಕೆಲಸ ಅಷ್ಟೇ ಉಳಿದಿದೆ ಎಂದು ತಿರುಗೇಟು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net