ಡಿಸಿಎಂ ಡಿಕೆಶಿ ಒಬ್ಬ ನೀರಿನ ಕಳ್ಳ

K.S.Eshwarappa
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಡಿಸಿಎಂ, ಜಲ ಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ನೀರಿನ ಕಳ್ಳ ಎಂದು ಜರಿದರು.

ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಸಮರ್ಥವಾಗಿ ವಾದ ಮಂಡಿಸದೇ ಕರ್ನಾಟಕದ ರೈತರಿಗೆ ದ್ರೋಹ ಮಾಡಿದ ಡಿ.ಕೆ.ಶಿವಕುಮಾರ್ ಒಬ್ಬ ಅಯೋಗ್ಯ ಎಂದು ಕಿಡಿಕಾರಿದರು.
ಮೂವರು ಡಿಸಿಎಂ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಅವರನ್ನು ಅವಮಾನಿಸಲು ಸಿದ್ದರಾಮಯ್ಯ ಚೇಲಾಗಳು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಡಿಕೆಶಿ ಚೇಲಾಗಳು ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡುತ್ತಿದ್ದಾರೆ. ಇವರ ವಿಚಾರಗಳಲ್ಲೇ ಗೊಂದಲವಿದೆ. ಹಾಗಾಗಿ ಮುಂದಿನ ಲೋಕಸಭೆ ಚುನಾವಣೆ ಪೂರ್ವ ಅಥವಾ ನಂತರ ರಾಜ್ಯ ಸರ್ಕಾರ ಬೀಳುತ್ತದೆ ಎಂದು ಭವಿಷ್ಯ ನುಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net