ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ಕರ್ತವ್ಯ

IMG-20250302-WA0013
Published on

ಉಡುಪಿ: ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ಸಕ್ಕರೆ ಕಾರ್ಖಾನೆ ಅವ್ಯವಹಾರ ವಿರುದ್ಧ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ಅನಿರ್ದಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಉಡುಪಿ ಜಿಲ್ಲಾ ರೈತ ಸಂದ ಪ್ರತಿನಿಧಿಗಳನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು.

ಸಹಕಾರ ಮಂತ್ರಿಯಾಗಿದ್ದಾಗ ಆಸ್ಕರ್ ಫರ್ನಾಂಡಿಸ್ ಜೊತೆ ಈ ಜಾಗಕ್ಕೆ ಬಂದಿದ್ದೆ.  ಸುಮಾರು 100 ಕ್ಕೂ ಹೆಚ್ಚು ಎಕರೆ ಜಾಗ ಇದೆ. ಆ ಕಾಲದಲ್ಲಿ ಸರ್ಕಾರ ಕಾರ್ಖಾನೆ ಸಿಬ್ಬಂದಿಗೆ ಸಾಕಷ್ಟು ಹಣ ನೀಡಿ ಸಹಾಯ ಮಾಡಿದ್ದೆ. ಹೊಸದಾಗಿ ಟೆಂಡರ್ ಕರೆದು ಕೆಲಸ ಆರಂಭಿಸಬೇಕು ಎಂದು ತೀಮಾರ್ನ ಆಗಿದೆ. ಆದರೆ ಅಕ್ರಮ ನಡೆದಿದ್ದು ಇದರ ವಿರುದ್ಧ ಹೋರಾಟ ಮಾಡುತ್ತಿದ್ದೀರಿ.  ಮಾರ್ಚ್ 8ರ ನಂತರ ಬೆಂಗಳೂರಿಗೆ ಬಂದರೆ, ಗೃಹಸಚಿವರು ಹಾಗೂ ಸಹಕಾರ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆಸಿ ಒಂದು ಸಭೆ ಮಾಡೋಣ ಎಂದು ಸಲಹೆ ನೀಡಿದರು. ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳ ಗಮನಕ್ಕೆ ತರಲಾಗುವುದು. ಈ ಬಗ್ಗೆ ಸಭೆ ಕರೆದು ಚರ್ಚೆ ಮಾಡೋಣ. ಪಕ್ಷದ ನಾಯಕರು ಉತ್ತಮ ವಿಚಾರಕ್ಕೆ ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ವಿಪ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಮಾನವಿ ನೀಡಿದರು. ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಮುಖಂಡರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net