ವಿದ್ಯಾರ್ಥಿಗಳಿಗೆ ಸಂಸ್ಕಾರವೂ ಮುಖ್ಯ

11.1
Published on

ಹೊಳೆನರಸೀಪುರ : ವಿದ್ಯಾರ್ಥಿಗಳಿಗೆ ಶಿಕ್ಷಣದಷ್ಟೇ ಸಂಸ್ಕಾರ ಮತ್ತು ವಿವೇಕವೂ ಮುಖ್ಯಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಎಸ್.ಟಿ. ಜವರೇಗೌಡ ಹೇಳಿದರು.ಗ್ರೀನ್‌ವುಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ 50ನೇ
ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಲು ಅವಕಾಶ ನೀಡಬೇಕು. ಇಲಾಖೆಯೂ ಇದಕ್ಕೆ ಆದ್ಯತೆ ನೀಡುತ್ತಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಮಾತನಾಡಿ, ಮಕ್ಕಳನ್ನು ಶಾಲೆಗೆ ಸೇರಿಸಿದರೆ ನಮ್ಮ ಜವಾಬ್ದಾರಿ ಮುಗಿಯಿತು ಎನ್ನುವ ಮನೋಭಾವ ಬೇಡ. ಮಕ್ಕಳು ಶಾಲೆಗಿಂತ ಹೆಚ್ಚು ಸಮಯ ಮನೆಯಲ್ಲೇ ಕಳೆಯುತ್ತಾರೆ. ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪಾಲಕರು ಮತ್ತು ಶಿಕ್ಷಕರು ಬೆಂಬಲವಾಗಿರಬೇಕು ಎಂದರು. ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಇರ್ಷಾದ್ ಬೇಗ್, ಕಾರ್ಯದರ್ಶಿ ನೂರ್ ಫಾತಿಮಾ, ಮುಖ್ಯ ಶಿಕ್ಷಕಿ ಮಂಜುಳಾ, ಶಿಕ್ಷಕಿ ಪಲ್ಲವಿ ಇದ್ದರು. ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳು ನೃತ್ಯ, ನಾಟಕ, ಯೋಗಾಸನ, ಜಾನಪದ ಸೊಗಡಿನ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net